ಉಪ್ಪಳದಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ದರೋಡೆ
ಕಾಸರಗೋಡು: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ಬುಧವಾರ ಮಧ್ಯಾಹ್ನ ಕಾಸರಗೋಡಿನ ಉಪ್ಪಳಪೇಟೆಯಲ್ಲಿ ನಡೆದಿದೆ. ವಾಹನದ ಗಾಜನ್ನು ಒಡೆದು 50 ಲಕ್ಷ ಪೆಟ್ಟಿಗೆಯನ್ನೇ ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ನ ಎ ಟಿ ಎಂ ಮೆಷಿನ್ ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭ ಈ ಘಟನೆ ನಡೆದಿದೆ. ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎಟಿಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ…
