ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೆ. 06 ರಂದು ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜನೆ
ಧಾರವಾಡ ಜಿಲ್ಲಾ ಆಡಳಿತ , ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತವಾಗಿ ಆಯೋಜಿಸಿರುವ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಧಾರವಾಡ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೆಪ್ಟೆಂಬರ 6 ರಂದು ಬೆಳಿಗ್ಗೆ 10:30 ಗಂಟೆಯಿಂದ 11:30 ರವರೆಗೆ ನೊಡಲ್ ಅಧಿಕಾರಿ ಡಾ. ಸರಸ್ವತಿದೇವಿ ಭಗವತಿ ಅವರು ಸಂಘಟಿಸಲಿದ್ದಾರೆ. ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢ ಶಾಲಾ ವಿಭಾಗ, ಪದವಿ ಪೂರ್ವ ಕಾಲೇಜು ವಿಭಾಗ ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಲ್ಲ…
