ರಾಮದುರ್ಗ ನ್ಯಾಯಾಲಯಗಳಲ್ಲಿ ನಡೆಯುವ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ವಿಚ್ಛೇದನ ಪ್ರಕರಣ : ಒಂದಾದ ದಂಪತಿಗಳು
ಹಲವಾರು ವರ್ಷಗಳಿಂದ ಪ್ರತ್ಯೇಕವಾಗಿದ್ದು ವಿಚ್ಛೇದನ ಪ್ರಕರಣ ಎದುರಿಸುತ್ತಿದ್ದ ಜೋಡಿ ದಂಪತಿಗಳನ್ನು ಒಂದು ಗೂಡಿಸುವ ಮೂಲಕ ರಾಮದುರ್ಗ ನ್ಯಾಯಾಲಯ ಗಮನ ಸೆಳೆದಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ರಾಮದುರ್ಗ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕ- 11/07/2026 ರಂದು ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ರಾಮದುರ್ಗ ನ್ಯಾಯಾಲಯದಲ್ಲಿ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಮಂಜುನಾಥ ನಾಯಕ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀಮತಿ ಪುಷ್ಪಲತಾ ಕೆ…
