ಬಕ್ರೀದ್ ಹಬ್ಬದ ಪ್ರಯುಕ್ತ ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ.
ಹಬ್ಬಗಳನ್ನು ಖಷಿಯಾಗಿರಲು ಆಚರಣೆ ಮಾಡಬೇಕು ವಿನಃ ಸ್ವಾರ್ಥದಿಂದ ಸಮಾಜದ ಸ್ವಾಸ್ಥ ಕೆಡಿಸುವಂತೆ ಇರಬಾರದು. ಅಂಥವರಿಂದ ಎಚ್ಚರಿಕೆಯಿಂದ ಇರಬೇಕು. ಸಮಾಜದಲ್ಲಿ ಶಾಂತಿ ಕದಡುವವರನ್ನು ಇಲಾಖೆ ಬಿಡುವುದಿಲ್ಲ ಎಂದು ಸಿಪಿಐ ವಿನಾಯಕ ಬಡಿಗೇರ ಹೇಳಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶನಿವಾರ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ನಡೆಸಲಾಯಿತು. ಈ ವೇಳೆ ಸಿಪಿಐ ವಿನಾಯಕ ಬಡಿಗೇರ ಮಾತನಾಡಿ, ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಮುಖಾಂತರ ಮತ್ತೊಬ್ಬರಿಗೆ ಮಾದರಿಯಾಗಿರಬೇಕು ಎಂದು ತಿಳಿಸಿದರು….
