ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ಜ್ಯೋತಿಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಚಾಲನೆ ನೀಡಿದರು.
ಬೆಂಗಳೂರು ವಿಧಾನಸೌಧ ಆವರಣದಲ್ಲಿ ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಇವರು ಎಂದರು. ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ…
