ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ ಸಹಕಾರಿ: ಸಚಿವ ಮಧು ಬಂಗಾರಪ್ಪ
ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಜರುಗಿದ ನಮ್ಮಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಲೋಗೋ ವನ್ನು ವಿದ್ಯಾರ್ಥಿಗಳಿಂದ ಅನಾವವರಣಗೊಳಿಸಿ ,ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿನ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸರಕಾರದ ಜೊತೆಗೆ ದಾನಿಗಳು ಕೈಜೋಡಿಸಿದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಬಹುದಾಗಿದೆ ಎಂದರು. ರಾಜ್ಯದಲ್ಲಿ ಸರಕಾರ…
