ದಾರವಾಡ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಚಿವ ಸಂತೋಷ ಲಾಡ್ ಉದ್ಘಾಟಿಸಿದರು.
ಧಾರವಾಡ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಧಾರವಾಡ ಜಿಲ್ಲಾ ಉಪ ನಿರ್ದೇಶಕರ ಕಾರ್ಯಾಲಯದಿಂದ ಆಯೋಜಿಸಿದ್ದ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಜೃಷ್ಣನ್‍ರವರ ಜನ್ಮದಿನದ ಅಂಗವಾಗಿ ಜಿಲ್ಲಾಮಟ್ಟದ ಶಿಕ್ಷಕರ ದಿನೋತ್ಸವ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಉದ್ಘಾಟಿಸಿ, ಮಾತನಾಡಿದರು.ಶಿಕ್ಷಕ ಸಮೂಹಕ್ಕೆ ಡಾ. ರಾಧಾಕೃಷ್ಣನ್ ಅವರದು ಮಾದರಿ ವ್ಯಕ್ತಿತ್ವ. ಅವರು ಶಿಕ್ಷಣ, ಸಮಾಜ, ಧರ್ಮ, ರಾಜಕೀಯ ಮತ್ತು…
