ಬೆಳಗಾವಿ ವಿಧಾನ ಮಂಡಳ ಚಳಿಗಾಲ ಅಧಿವೇಶನ-2025: ಪೂರ್ವ ಸಿದ್ಧತೆ ಪರಿಶೀಲನೆ
ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಬುಧವಾರ ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಅಧಿವೇಶನದ ಕಾರ್ಯಕ್ಕೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೇ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ,ಕಾಲೇಜು ವಿದ್ಯಾರ್ಥಿಗಳಿಗೆ ಮುಖ್ಯ ದ್ವಾರದಿಂದ ಸುವರ್ಣ ವಿಧಾನ ಸೌಧದವರೆಗೆ ಕರೆತರಲು ನಿಯಮಿತವಾಗಿ ಮಿನಿಬಸ್ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು. ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಶಾಸಕರು, ಅಧಿಕಾರಿ, ಸಿಬ್ಬಂದಿಗೆ ಸೂಕ್ತ ವಸತಿ…
