ರಾಮದುರ್ಗದಲ್ಲಿ ಶೀಘ್ರ ರೈಲ್ವೆ ಮಾರ್ಗ ನಿರ್ಮಾಣ ಮಾಡಬೇಕೆಂದು ಪ್ರತಿಭಟನೆ
ಲೋಕಾಪೂರದಿಂದ ರಾಮದುರ್ಗ ಮುಖಾಂತರ ಧಾರವಾಡಕ್ಕೆ ಶೀಘ್ರ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳದೇ ಹೋದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಬೇಕಾಗುತ್ತದೆ ಎಂದು ಹೋರಾಟ ಸಮಿತಿಯ ಪದಾಧಿಕಾರಿಗಳು ತಹಶೀಲ್ದಾರ ಮುಖಾಂತರ ಉಭಯ ಸರಕಾರಗಳ ಮುಖ್ಯಸ್ಥರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸೋಮವಾರ ತಹಶೀಲ್ದಾರ್ ಮೂಲಕ ಕೇಂದ್ರದ ರೈಲ್ವೆ ಸಚಿವ, ರಾಜ್ಯದ ರಾಜ್ಯಪಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಮನವಿ ಸಲ್ಲಿಸಿದ ಹೋರಾಟಗಾರರು, ಕಳೆದ 20 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದರೂ ಈ…
