ಜಿಲ್ಲಾ ನಿರ್ಮಿತಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ
ಬೆಳಗಾವಿ, ಭಾರತ ಸರ್ಕಾರ/ಹುಡ್ಕೋ ಮತ್ತು ಕರ್ನಾಟಕ ಸರ್ಕಾರದ ಪ್ರೋತ್ಸಾಹಿತ ಜಿಲ್ಲಾ ನಿರ್ಮಿತಿ ಕೇಂದ್ರದ ವತಿಯಿಂದ ಗಣೇಶಪುರ ಲಕ್ಷ್ಮೀ ಟೇಕ್ ಹತ್ತಿರದ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಹಿಂಬಾಗದಲ್ಲಿ ನಿರ್ಮಿಸಲಾಗಿರುವ ಜಿಲ್ಲಾ ನಿರ್ಮಿತಿಕೇಂದ್ರದ ನೂತನ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ರವಿವಾರ ಉದ್ಘಾಟಿಸಿದರು. ಬಳಿಕ ಜಿಲ್ಲಾ ನಿರ್ಮಿತಿ ಕೇಂದ್ರದ ನೂತನ ಕಟ್ಟಡದ ಗುಣಮಟ್ಟ, ವಿನ್ಯಾಸ, ಕಚೇರಿಯ ಕೊಠಡಿಗಳು, ಮುಂಭಾಗದ ಉದ್ಯಾನವನ ವೀಕ್ಷಿಸಿದ ಸಚಿವರು, ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ…
