ಧಾರವಾಡ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳ ಪೂರ್ವಭಾವಿ ಸಭೆ
ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳ ಮತ್ತು ಅವಳಿ ನಗರದ ಕೈಗಾರಿಕೋದ್ಯಮಿಗಳೊಂದಿಗೆ ಪೂರ್ವಭಾವಿ ಸಿದ್ಧತಾ ಸಭೆಯನ್ನು ಉದ್ದೇಶಿಸಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಮಾತನಾಡಿದರು. ಅರ್ಹತೆ ಇರುವ ಪ್ರತಿಯೊಬ್ಬ ವ್ಯಕ್ತಿಗೂ ಉದ್ಯೋಗ ದೊರೆಯಬೇಕು ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗಲು ಸರ್ಕಾರದಿಂದಲೇ ಉದ್ಯೋಗ ಮೇಳ ಆಯೋಜಿಸಿ, ಖಾಸಗಿ ಕೈಗಾರಿಕೆಗಳಲ್ಲಿ ಉದ್ಯೋಗ ಕಲ್ಪಿಸಲು ಈ ಉದ್ಯೋಗ ಮೇಳ ಸಂಘಟಿಸಲಾಗುತ್ತಿದೆ ಎಂದರು. ಉದ್ಯೋಗ ಮೇಳವನ್ನು ವ್ಯವಸ್ಥಿತವಾಗಿ ಸಂಘಟಿಸಬೇಕು. ಮೇಳ…
