Prashanth Angadi

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿವಹಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರು ಹಾಗೂ ಫಲಾನುಭವಿಗಳೊಂದಿಗೆ ಮುಕ್ತ ಸಂವಾದ ನಡೆಸಬೇಕು. ಯೋಜನೆಗಳ ಪ್ರಯೋಜನ ಪಡೆಯುವಲ್ಲಿ ಫಲಾನುಭವಿಗಳು ಸಮಸ್ಯೆ ಎದುರಿಸುತ್ತಿದ್ದರೆ ತಕ್ಷಣ ಸ್ಪಂದಿಸಬೇಕು ಎಂದು ಹೇಳಿದರು. ಯೋಜನೆಯಿಂದ ಹೊರಗುಳಿದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಯೋಜನೆಯ ಲಾಭ ದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು, ಗ್ಯಾರಂಟಿ ಅನುಷ್ಠಾನ ಸಮಿತಿ…

Read More

ಚಾಮರಾಜನಗರ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿಟ್ಟಿದ್ದ ಗೋಡಾಮಿನ ಮೇಲೆ ದಾಳಿ ನಡೆಸಿ 2 ಟನ್‌ಗೂ ಅಧಿಕ ಅಕ್ಕಿ ವಶ

ಚಾಮಾಜನಗರ: ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಮಂಗಳವಾರ (ಮಾರ್ಚ್‌.25) ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಮತ್ತು ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ 2 ಟನ್‌ಗೂ ಅಧಿಕ ಅಕ್ಕಿ ವಶಕ್ಕೆ ಪಡೆದ ಘಟನೆ ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ನಡೆದಿದೆ. ಈ ಕುರಿತು ಗ್ರಾಮಾಂತರ ಪ್ರದೇಶದಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಆಧಾರದ ಮೇಲೆ ಅಕ್ಕಿ ಖರೀದಿಸಿದ ಗೋಡಾಮಿನ ಮೇಲೆ ಪರಿಶೀಲನೆ ನಡೆಸಿದ್ದು, ಸುಮಾರು 2,200 ಕೆ.ಜಿ.ಗೂ ಅಧಿಕ ಪಡಿತರ…

Read More

ಅಕ್ರಮ ಪಡಿತರ ಅಕ್ಕಿ ಜಪ್ತಿ ವೇಳೆಯಲ್ಲಿ ಮಾಧ್ಯಮದವರಿಗೆ ಧಮಕಿ ಹಾಕಿದ ಸಚಿನ್ ಕಬ್ಬೂರು

ಹಾವೇರಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಮಾರಾಟ ರಾಜಾರೋಷವಾಗಿ ಪಡಿತರ ಅಕ್ಕಿ ಸಂಗ್ರಹ ಮಾಡುತ್ತಿದ್ದಾರೆ. ಜಿಲ್ಲೆಯ ಬಹುತೇಕ ಕಡೆ ನ್ಯಾಯಬೆಲೆ ಅಂಗಡಿಗಳ ಪಕ್ಕದಲ್ಲೇ ಕಾಳಸಂತೆ ಅಂಗಡಿಗಳು ಓಪನ್ ಆಗಿವೆ. ಪಡಿತರ ಅಕ್ಕಿ ಕಾಳಸಂತೆಕೋರರ ಬಗ್ಗೆ ವರದಿ ಮಾಡಲು ಮಾಧ್ಯಮ ಪ್ರತಿನಿಧಿಗಳು ಸ್ಥಳಕ್ಕೆ ಹೋಗಿದ್ದರು. ಈ ವೇಳೆ ಅಕ್ಕಿ ದಂಧೆ ಕೋರೋರು ದಮಕಿ ಹಾಕಿ ದರ್ಪ ಮೆರೆದಿದ್ದಾರೆ. ಹಾವೇರಿ ನಗರದ ಅಕ್ಕಿಪೇಟೆಯ ಬಸವರಾಜ ಹಂದ್ರಾಳ ಎಂಬುವವರ ಮನೆಯಲ್ಲಿ ಅನ್ನಭಾಗ್ಯ ಅಕ್ಕಿ ಸಂಗ್ರಹ ಮಾಡಲಾಗಿದೆ. ಈ ಬಗ್ಗೆ ವರದಿ ಮಾಡಲು ಹೋಗಿದ್ದ…

Read More

ಕಲಬುರಗಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಸಮೇತ 104 ಕ್ವಿಂಟಲ್ ಅಕ್ಕಿ ಜಪ್ತಿ,

ಕಲಬುರಗಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಚಾಲಕನನ್ನು ಬಂಧಿಸಿ, ಲಾರಿ ಸಮೇತ 104 ಕ್ವಿಂಟಲ್ ಅಕ್ಕಿ ವಶಪಡಿಸಿಕೊಳ್ಳುವಲ್ಲಿ ಚೌಕ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ರಿಂಗ್ ರೋಡ್ ಬಳಿಯ ತಾಜ್ ನಗರದಲ್ಲಿ ಪೊಲೀಸರು ಲಾರಿ ತಡೆದು ವಿಚಾರಿಸಿದಾಗ ಚಾಲಕ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರಿಗೆ ಸೇರಿದ ಅಕ್ಕಿ ಎಂದು ಬಾಯ್ಬಿಟ್ಟಿದ್ದಾನೆ. ಲಾರಿ ಚಾಲಕ ವಿರೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದಾಗ ಪಡಿತರ ಅಕ್ಕಿಯನ್ನು ಲಾರಿ ಸಮೇತ ಪೊಲೀಸರು…

Read More

ಹಳೇ ಹುಬ್ಬಳ್ಳಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 500 ಕ್ಷಿಂಟಾಲ್​ ಪಡಿತರ ಅಕ್ಕಿ ಜಪ್ತಿ, ಹಾಗೂ ಇಬ್ಬರ ರೇಷನ್ ಕಾರ್ಡ್​ ರದ್ದು.

ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಬುಧವಾರ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವೇಳೆ ಆಹಾರ ಇಲಾಖೆ ದಾಳಿ ನಡೆಸಿದೆ. ಸುಮಾರು 500 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಿದರು . ಅಕ್ರಮವಾಗಿ ಅಕ್ಕಿ ಮಾರಾಟ ಮಾಡುತ್ತಿದ್ದ ವೇಳೆ ಇಬ್ಬರು ಮಹಿಳೆಯರನ್ನುಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪಡಿತರ ಚೀಟಿಗಳನ್ನು ರದ್ದುಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅಕ್ರಮವಾಗಿ ಪಡಿತರ ಅಕ್ಕಿಯನ್ನು ಖರೀದಿಸಿ, ಟಾಟಾ ಏಸಿ ವಾಹನದಲ್ಲಿ ಲೋಡ್​ ಮಾಡುತ್ತಿದ್ದ ವೇಳೆ ಆಹಾರ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ…

Read More

ಬೀದರ್ 3,99,534 ರೂ. ಮೌಲ್ಯದ ಅಧಿಕ ಅಕ್ರಮ ಪಡಿತರ ಅಕ್ಕಿ ಜಪ್ತಿ

ಬೀದರ್‌ ಪಟ್ಟಣದ ಹಳೆ ನಾವದಗೇರಿಯ ಶೆರ್ಟ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿರುವ 3,99,534 ರೂ. ಮೌಲ್ಯದ ಸುಮಾರು 117 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಮವಾರ ಅನೌಪಚಾರಿಕ ಪಡಿತರ ಪ್ರದೇಶದ ಆಹಾರ ನಿರೀಕ್ಷಕ ಉಪನಿರ್ದೇಶಕರು ಹಾಗೂ ಜಿಲ್ಲಾ ಆಹಾರ ನಿರೀಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿ, ನಗರದ ಹಳೆ ನಾವದಗೇರಿ ಹತ್ತಿರ…

Read More

ಬೂದಿಹಾಳ ಚೆಕ್ ಪೋಸ್ಟ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 182.90 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸ ಹಾಗೂ ಆಹಾರ ಇಲಾಖೆ ಜಪ್ತಿ ಮಾಡಿರುತ್ತಾರೆ

ಗದಗ್ ಜಿಲ್ಲಾ ನರಗುಂದ ತಾಲೂಕಿನ ಕೊಣ್ಣೂರ ಬಳಿ ಬೂದಿಹಾಳ ಚೆಕ್ ಪೋಸ್ಟ್ನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 182.90 ಕ್ವಿಂಟಲ್ ಪಡಿತರ ಅಕ್ಕಿಯನ್ನು ನರಗುಂದ ಪೊಲೀಸರು ಹಾಗೂ ಆಹಾರ ನಿರೀಕ್ಷರು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಯಲಬುರ್ಗಾ ತಾಲ್ಲೂಕಿನ ಪುಟಗಮಮರಿ ನಿರಂಜನಯ್ಯ ಕಂಟಿಬಸಯ್ಯ ನಂದಾಪುರ ಎಂಬ ವ್ಯಕ್ತಿ ಕ್ಯಾಂಟರ್ ವಾಹನದಲ್ಲಿ ಗಜೇಂದ್ರಗಡದಿಂದ ಕೊಣ್ಣೂರ ಮಾರ್ಗವಾಗಿ ಬೆಳಗಾವಿ ಜಿಲ್ಲೆ ಹುಕ್ಕೇರಿಗೆ ಮಾರಾಟ ಮಾಡಲು ಅಕ್ರಮವಾಗಿ ಸಾಗಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರ ಕೈಗೆ ವಾಹನ ಸಮೇತ ಸಿಕ್ಕಿ ಬಿದ್ದಿದ್ದಾನೆ. ಈ ಕುರಿತು ಮಾಹಿತಿ ನೀಡಿದ ಆಹಾರ…

Read More

ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ : ಆಹಾರ ಇಲಾಖೆಯಿಂದ ದಾಳಿ ನಡೆಸಿ 515 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ 6 ವಾಹನಗಳು ಜಪ್ತಿ

ಕಲಬುರಗಿ ಜಿಲ್ಲೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ದೂರು ಬಂದ ಆಧಾರದ ಮೇಲೆ ದಾಳಿ ಮಾಡಿ 17,70,275 ರೂ. ಮೌಲ್ಯದ ಒಟ್ಟು 515 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ 6 ವಾಹನಗಳನ್ನು ಜಪ್ತಿ ಮಾಡಿ ಈ ಕೃತ್ಯಗಳಲ್ಲಿ ಭಾಗಿಯಾದ 18 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕಲಬುರಗಿ ಆಹಾರ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪಡಿತರ ಚೀಟಿದಾರರಿಗೆ ಹಂಚಿಕೆಯಾಗಿರುವ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ…

Read More

ಶಿಂದೋಗಿಯ ನೂತನ ಗ್ರಾಮ ಪಂಚಾಯತ ಸಭಾ ಭವನವನ್ನು ಶಾಸಕ ವಿಶ್ವಾಸ ವೈದ್ಯ ಅವರು ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿಂದೋಗಿಯ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ನೂತನವಾಗಿ ನಿರ್ಮಿಸಿದ ಸಭಾ ಭವನವನ್ನು ಸವದತ್ತಿ-ಯಲ್ಲಮ್ಮ ಮತಕ್ಷೇತ್ರದ ಜನಪ್ರಿಯ ಶಾಸಕ ವಿಶ್ವಾಸ ವೈದ್ಯ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಶಾಸಕ ವಿಶ್ವಾಸ ವೈದ್ಯರಿಗೆ ಸನ್ಮಾನ ಮಾಡಿದರು .ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ .ಅಧ್ಯಕ್ಷಾದ ಡಿ.ಡಿ.ಟೋಪೋಜಿ ,ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣಾಭಿವೃದ್ದಿ ಅಧಿಕಾರಿಗಳು,ನರೇಗಾ ಅಧಿಕಾರಿಗಳು, ಗ್ರಾಮ ಪಂಚಾಯಿತಿ , ಸರ್ವ ಸದಸ್ಯರು, ಅಭಿವೃದ್ದಿ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ವಿಶ್ವ ಕ್ಷಯರೋಗ ದಿನಾಚರಣೆ ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯಿತಿಗಳ ಸತ್ಕಾರ ಸಮಾರಂಭ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿದರು.

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯಿತಿಗಳ ಸತ್ಕಾರ ಸಮಾರಂಭವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿ, ಮಾತನಾಡಿದರು. ವಿಶ್ವ ಆರೋಗ್ಯ ಸಂಸ್ಥೆಯು 2030 ರ ವೆಳೆಗೆ ಇಡೀ ವಿಶ್ವವನ್ನು ಕ್ಷಯರೋಗದಿಂದ ಮುಕ್ತಗೊಳಿಸುವ ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 35 ಗ್ರಾಮ…

Read More