Prashanth Angadi

ಧಾರವಾಡ ಪೂರಕ ಪೌಷ್ಠಿಕ ಆಹಾರ ತಯಾರಿಕಾ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ

ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್.ದೊಡ್ಡಮನಿ ಅವರು ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸುವ ಘಟಕಗಳಾದ ಲಕಮನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಎಂ.ಎಸ್.ಪಿ.ಸಿ ಮತ್ತು ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲಿಸಿದರು. ಸರಕಾರದಿಂದ ಬಿಡುಗಡೆಯಾದ ಆಹಾರ ಧಾನ್ಯಗಳ ವಿವರ ಮತ್ತು ಅಂಗನವಾಡಿ ಕೇಂದ್ರಗಳಿಗೆ ಪೂರೈಸಿದ ವಿವರವನ್ನು ನೀಡಲು ಸೂಚಿಸಲಾಯಿತು. ನಂತರ ಉಣಕಲ್ ಕ್ರಾಸಿನಲ್ಲಿರುವ ಸರ್ಕಾರಿ ಬಾಲಕರ ಬಾಲ ಮಂದಿರ,…

Read More

ರಾಮದುರ್ಗ ಎಂಇಎಸ್ ಪುಂಡರು ಮಾಡಿರುವ ಹಲ್ಲೆಯನ್ನು ಖಂಡಿಸಿ ಪಟ್ಟಣದ ಹುತಾತ್ಮಚೌಕದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಟಾಯರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹುತಾತ್ಮಚೌಕದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾ ಘಟಕದ ನೆತೃತ್ವದಲ್ಲಿಎಂಇಎಸ್ ಪುಂಡರು ಮಾಡಿರುವ ಹಲ್ಲೆಯನ್ನು ಖಂಡಿಸಿ ಟಾಯರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಕನ್ನಡಗರ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವದು ಖಂಡನೀಯ. ಸರಕಾರ ಇಂತಹ ಪುಮಡರಿಗೆ ಕಡಿವಾಣ ಹಾಕುವಲ್ಲಿ ಮುಂದಾಗಬೇಕು. ಸರಕಾರಿ ನೌಕರರ ಹಿತ ಕಾಪಾಡುವಲ್ಲಿ ಸರಕಾರ ಅಗತ್ಯ ಕ್ರಮವಹಿಸಬೇಕು. ಪದೇ ಪದೇ ಇಂತಹ ಕೃತ್ಯಗಳು ನಡೆಯುತ್ತಿದ್ದು, ಇದಕ್ಕೆ ತಕ್ಕ ಪಾಠ ಕಲಿಸುವಲ್ಲಿ ಕರವೇ ಕಾರ್ಯಕರ್ತರು ಸನ್ನದ್ದರಾಗಿದ್ದು, ಸರಕಾರ ಕೂಡಲೇ ತಪ್ಪಿಸ್ಥರ…

Read More

ಧಾರವಾಡ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳ ಪೂರ್ವಭಾವಿ ಸಭೆ

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳ ಮತ್ತು ಅವಳಿ ನಗರದ ಕೈಗಾರಿಕೋದ್ಯಮಿಗಳೊಂದಿಗೆ ಪೂರ್ವಭಾವಿ ಸಿದ್ಧತಾ ಸಭೆಯನ್ನು ಉದ್ದೇಶಿಸಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಮಾತನಾಡಿದರು. ಅರ್ಹತೆ ಇರುವ ಪ್ರತಿಯೊಬ್ಬ ವ್ಯಕ್ತಿಗೂ ಉದ್ಯೋಗ ದೊರೆಯಬೇಕು ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗಲು ಸರ್ಕಾರದಿಂದಲೇ ಉದ್ಯೋಗ ಮೇಳ ಆಯೋಜಿಸಿ, ಖಾಸಗಿ ಕೈಗಾರಿಕೆಗಳಲ್ಲಿ ಉದ್ಯೋಗ ಕಲ್ಪಿಸಲು ಈ ಉದ್ಯೋಗ ಮೇಳ ಸಂಘಟಿಸಲಾಗುತ್ತಿದೆ ಎಂದರು. ಉದ್ಯೋಗ ಮೇಳವನ್ನು ವ್ಯವಸ್ಥಿತವಾಗಿ ಸಂಘಟಿಸಬೇಕು. ಮೇಳ…

Read More

ಬಳ್ಳಾರಿ: ಗ್ಯಾರಂಟಿ ಯೋಜನೆಗಳ ಪ್ರಚಾರದ ವಾಹನಕ್ಕೆ ಚಾಲನೆಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಮಟ್ಟ ಸುಧಾರಣೆ: ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ

ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಎಲ್‌ಇಡಿ ವಾಹನ ಹಾಗೂ ಬೀದಿ ನಾಟಕದ ಮೂಲಕ ಗ್ಯಾರಂಟಿ ಯೋಜನೆಗಳ ಪ್ರಚಾರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ಬಡ ಜನರು, ಮಧ್ಯಮ ವರ್ಗದ ಜನರ ಆರ್ಥಿಕ ಮಟ್ಟವನ್ನು ಸುಧಾರಿಸಲು ಕೊಟ್ಟ ಮಾತಿನಂತೆ ಪಂಚ…

Read More

ಬೆಟಗೇರಿ:ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ವಿವಿಧ ಯೋಜನೆಯಡಿಯಲ್ಲಿ ಸಾಲ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

ಬೆಟಗೇರಿ:ಗ್ರಾಮೀಣ ವಲಯದ ಕೆನರಾ ಬ್ಯಾಂಕ್‌ಗಳಲ್ಲಿ ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಹಾಗೂ ಗ್ರಾಹಕರಿಗೆ, ದೊರಕುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹುಬ್ಬಳ್ಳಿಯ ಕೆನರಾ ಬ್ಯಾಂಕ್ ಸರ್ಕಲ್ ಆಫೀಸ್‌ನ ಜನರಲ್ ಮ್ಯಾನೇಜರ್ ವಿಜಯಕುಮಾರ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ಇತ್ತೀಚೆಗೆ ನಡೆದ ಕೃಷಿ ಮತ್ತು ಸ್ವ ಸಹಾಯ ಸಂಘಗಳ ಸಾಲ ವಿತರಣೆ ಹಾಗೂ ಜಾಗೃತಿ ಶಿಬಿರದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಬೆಟಗೇರಿ ಕೆನರಾ ಬ್ಯಾಂಕ್ ಶಾಖೆ ವ್ಯಾಪ್ತಿಯ ಸ್ಥಳೀಯ…

Read More

ಸವದತ್ತಿ ವಕೀಲರ ಸಂಘದಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ವಕೀಲರ ಸಂಘದಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಶ್ರೀ ಜಿ ವಾಯ್ ಕರಮಲ್ಲಪ್ಪನವರ ವಕೀಲರು ಮಾತನಾಡಿ ಶಿವಾಜಿ ಮಹಾರಾಜರು ಬಾಲ್ಯದ ದಿನದಿಂದಲೇ ತನ್ನ ತಾಯಿಯಿಂದ ಪ್ರೇರಿತರಾಗಿ ಬೆಳೆದು ಯುದ್ಧ ಪರಿಣಿತಿಯನ್ನು ಸರಳವಾಗಿ ಮೈಗೂಡಿಸಿಕೊಂಡು ವೈರಿಗಳಿಗೆ ಸಿಂಹ ಸ್ವಪ್ನವಾಗಿದ್ದರೆಂದು ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಶ್ರೀ ಬಿ ಎಸ್ ಹೊಣಗೇಕರ, ಶ್ರೀ ಸಿ ಬಿ ದೊಡ್ಡಗೌಡರ, ಆರ್ ಎಂ…

Read More

ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ

ಸವದತ್ತಿ, ತಾಲೂಕಾ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕಃ 13-02-2025 ರಂದು ಸರ್ಕಾರಿ ಆದರ್ಶ ಮಹಾವಿಧ್ಯಾಲಯ ಯಡ್ರಾಂವಿಯಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು.

Read More

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ತಿರುಪತಿ, ಧರ್ಮಸ್ಥಳ ಮಾದರಿಯಲ್ಲಿ ಅಭಿವೃದ್ಧಿಗೆ ಯೋಜನೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ ಜಿಲ್ಲೆ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಬುಧವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಚಕ್ಕಡಿಗಾಡಿ, ಜೀಪ್, ಟೆಂಪೋ, ಟ್ರ್ಯಾಕ್ಟರ್, ಬೈಕ್, ಕಾರ್, ಬಸ್ ಸೇರಿದಂತೆ ಎಲ್ಲ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಸರಿಸುಮಾರು 1500 ಪೊಲೀಸ್ ಹಾಗೂ ಗೃಹರಕ್ಷಕ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಪ್ರವಾಸೋದ್ಯಮ ಸಚಿವರು, ಪ್ರವಾಸೋದ್ಯಮ ಮಂಡಳಿ ಅಧ್ಯಕರು, ಈ ಭಾಗದ ಶಾಸಕರ ಸಲಹೆಯಂತೆ ವಿವಿಧ…

Read More

ಮಹಾತ್ಮ‌ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಮೃತ ಸರೋವರ ಜಿಲ್ಲಾ ಪುರಸ್ಕಾರ ಸೇರಿದಂತೆ ಒಟ್ಟು ಐದು ಪ್ರಶಸ್ತಿಗಳನ್ನು ಬೆಳಗಾವಿ ಜಿಲ್ಲೆಗೆ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್. ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಅಂಬೇಡ್ಕರ್ ಭವನದಲ್ಲಿ ಬುಧವಾರ ನರೇಗಾ ಹಬ್ಬ-2025 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಂಕಾ ಖರ್ಗೆ ಅವರು ಜಿಪಂ ಸಿಇಒ ರಾಹುಲ್ ಶಿಂಧೆ, ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪ, ಎಡಿಪಿಸಿ ಬಸವರಾಜು, ಜಿಲ್ಲಾ ಐಇಸಿ ಸಂಯೋಜಕ ಪ್ರಮೋದ ಗೋಡೆಕರ್ ಅವರಿಗೆ ಅಮೃತ ಸರೋವರ ಜಿಲ್ಲಾ ಪುರಸ್ಕಾರ ನೀಡಿ ಗೌರವಿಸಿದರು. ಅದೇ…

Read More

ರಾಮದುರ್ಗ ಕಾಟಾಚಾರಕ್ಕಾಗಿ ಸವಿತಾ ಮಹರ್ಷಿ ಜಯಂತಿ ಆಚರಣೆ ಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ದಿನಾಂಕ.4/2/2025 ರಂದು ಶ್ರೀ ಸವಿತಾ ಮಹರ್ಷಿ ಅವರ ಫೋಟೋ ಇದ್ದಂತ ಕಟ್ಟನ್ನು ಇಟ್ಟು ಪೂಜೆ ಮಾಡುವ ಬದಲಾಗಿ ಫೋಟೋವನ್ನು ಜೆರಾಕ್ಸ್ ಕಾಪಿ ತೆಗೆದು ಪೂಜೆ ಮಾಡಿರುತ್ತಾರೆಯಾವುದೇ ಜಯಂತಿಗಳಾಗಲಿ ಇದರ ಬಗ್ಗೆ ತಾಲೂಕ ಆಡಳಿತದಿಂದ ನಾಲ್ಕು ದಿನ ಮುಂಚೆನೇ ಸಭೆ ಕರೆದಿರುತ್ತಾರೆ ಇದನ್ನೆಲ್ಲ ಗಮನಿಸಿದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕಾಟಾಚಾರಕ್ಕಾಗಿ ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ ಮಾಡಿರುತ್ತಾರೆ.

Read More