ಅಡುಗೆ ಸಿಬ್ಬಂದಿಗಳಿಗೆ ಹಮ್ಮಿಕೊಂಡ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.
ಬಿಸಿಯೂಟ ತಯಾರಿಕೆಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರ ಬಹಳ ಮುಖ್ಯವಾದದ್ದು. ಆದರೆ ಅವರಿಗೆ ಸರಕಾರ ನೀಡುವ ಗೌರವ ಧನ ಮಾತ್ರ ಕಡಿಮೆ ಇದೆ. ಇರುವ ಗೌರವ ಧನದಲ್ಲಿ ಇದೊಂದು ಮಕ್ಕಳ ಸೇವೆ ಎಂದು ತಿಳಿದು ಶ್ರದ್ಧೆಯಿಂದ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ಸರಕಾರ ತಮ್ಮ ಗೌರವ ಧನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು. ರಾಮದುರ್ಗ ಪಟ್ಟಣದ ವಿದ್ಯಾಚೇತನ ಆವರಣದಲ್ಲಿರುವ ಗುರುಭವನದಲ್ಲಿ ರವಿವಾರ ಅಕ್ಷರದಾಸೋಹ ಇಲಾಖೆಯಿಂದ ಬಿಸಿಯೂಟ ತಯಾರಿಕೆ ಸಿಬ್ಬಂದಿಗಳಿಗಾಗಿ…
