ಸಾರ್ವಜನಿಕ ಸೇವಕರ ವಿರುದ್ಧ ಖಾಸಗಿ ದೂರಿಗೆ ಪೂರ್ವಾನುಮತಿ ಅಗತ್ಯವಿಲ್ಲ: ನ್ಯಾಯಾಧೀಶ ಎನ್. ವ್ಹಿ. ವಿಜಯ್
ಧಾರವಾಡ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಪ್ರಕಾರ ಸಾರ್ವಜನಿಕ ಸೇವಕರ ಮೇಲೆ ಖಾಸಗಿ ದೂರು ದಾಖಲಿಸಲು ಮೊದಲು ಪೂರ್ವಾನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿತ್ತು. ಆದರೆ ಈಗ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ, ಯಾವುದೇ ಸಾರ್ವಜನಿಕ ಸೇವಕರ ವಿರುದ್ಧ ಪೂರ್ವಾನುಮತಿ ಇಲ್ಲದೆಯೂ ಖಾಸಗಿ ದೂರು ದಾಖಲಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎನ್. ವ್ಹಿ. ವಿಜಯ್ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜಿಲ್ಲಾ ಕಾನೂನು…
