ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಕಾನ್ಸ್ಟೇಬಲ್, ₹1.70 ಲಕ್ಷ ಲಂಚ ಸ್ವೀಕರಿಸುವಾಗಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಕಾನ್ಸ್ಟೇಬಲ್, ಪ್ರಕರಣವೊಂದರಿಂದ ಹೆಸರು ಕೈಬಿಡಲು ₹2 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಲೋಕಾಯುಕ್ತ ಪೊಲೀಸರು, ₹1.70 ಲಕ್ಷ ಲಂಚ ಸ್ವೀಕರಿಸುವಾಗ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಇಸ್ಪೀಟ್ ಮತ್ತು ಬಡ್ಡಿ ದಂಧೆಯ ಪ್ರಕರಣದಿಂದ ಹೆಸರು ಕೈಬಿಡಲು ಹಾಗೂ ವಶಪಡಿಸಿಕೊಂಡಿದ್ದ ಬೈಕ್ ಬಿಡುಗಡೆ ಮಾಡಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಿಎಸ್ಐ ಮತ್ತು ಕಾನ್ಸ್ಟೇಬಲ್ ಅವರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಕೆರೂರು…
