ಎಸ್.ಐ.ಆರ್ ಪ್ರಕ್ರಿಯೆ ಕಾಲಮಿತಿಯೊಳಗೆ ಪೂರ್ಣಗೊಳಿಸಲು ರಾಜ್ಯ ಮುಖ್ಯಚುನಾವಣಾಧಿಕಾರಿ ಅನ್ಬುಕುಮಾರ್ ಸೂಚನೆ.
ಬೆಳಗಾವಿ / ಬೆಂಗಳೂರು,ಹೊಸ ಮತದಾರರ ಸೇರ್ಪಡೆ, ಮೃತಪಟ್ಟ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದುಹಾಕುವುದು, ವಿವರಗಳ ತಿದ್ದುಪಡಿ ಸೇರಿದಂತೆ ಮತದಾರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಶೇಕಡಾ 100% ರಷ್ಟು ಪೂರ್ಣಗೊಳಿಸಲು ಬೂತ್ ಮಟ್ಟದ ಅಧಿಕಾರಿಗಳು (BLO) ಮನೆಮನೆಗೆ ಭೇಟಿ ನೀಡಿ ಮಾಹಿತಿ ಪರಿಶೀಲಿಸಬೇಕು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ತಿಳಿಸಿದರು. ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ಮತದಾರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (SIR) ಕುರಿತು ನಡೆದ ಪ್ರಗತಿ ಪರಿಶೀಲನಾ…
