Prashanth Angadi

ಗ್ಯಾಸ್ ರೀಪಿಲ್ಲಿಂಗ್ ದಂಧೆ : 470 ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್ ಜಪ್ತಿ.

ಧಾರವಾಡ ಸಮೀಪದ ಜೋಗೆಲ್ಲಾಪುರದ ಬನಶಂಕರಿ ಎಂಟರ್ ಪ್ರೈಜಿಸ್ ನ ಎಚ್.ಪಿ. ಗ್ಯಾಸ್ ಸಿಲಿಂಡರ್ ಗೋಡೌನ್ ನಲ್ಲಿಸಿಲಿಂಡರ್ ರೀಫಿಲ್ಲಿಂಗ್ ದಂಧೆ ನಡೆಯುತ್ತಿದ್ದ ಅಡ್ಡೆಯ ಮೇಲೆ ತಹಸೀಲ್ದಾರ್ ಡಿ.ಎಚ್. ಹೂಗಾರ ನೇತೃತ್ವದ ತಂಡ, ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿ 470 ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್ ಹಾಗೂ ರೀಫಿಲ್ಲಿಂಗ್ ಗೆ ಬಳಸುತ್ತಿದ್ದ ಯಂತ್ರಗಳನ್ನೂ ವಶಕ್ಕೆ ಪಡೆದಿದ್ದಾರೆ. ಎಚ್.ಪಿ. ಸಿಲಿಂಡರ್ ಗುಡೌನ್ ನಲ್ಲಿ ಭಾರತ ಗ್ಯಾಸ್ ಕಂಪನಿಯ ಮತ್ತು ಗೋ ಗ್ಯಾಸ್ ಕಂಪನಿಯ…

Read More

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಬೆಂಗಳೂರು ಏ.02: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು. ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು. 1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ…

Read More

ಜಿಲ್ಲಾ ನಿರ್ಮಿತಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಬೆಳಗಾವಿ, ಭಾರತ ಸರ್ಕಾರ/ಹುಡ್ಕೋ ಮತ್ತು ಕರ್ನಾಟಕ ಸರ್ಕಾರದ ಪ್ರೋತ್ಸಾಹಿತ ಜಿಲ್ಲಾ ನಿರ್ಮಿತಿ ಕೇಂದ್ರದ ವತಿಯಿಂದ ಗಣೇಶಪುರ ಲಕ್ಷ್ಮೀ ಟೇಕ್ ಹತ್ತಿರದ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಹಿಂಬಾಗದಲ್ಲಿ ನಿರ್ಮಿಸಲಾಗಿರುವ ಜಿಲ್ಲಾ ನಿರ್ಮಿತಿ‌ಕೇಂದ್ರದ ನೂತನ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ರವಿವಾರ ಉದ್ಘಾಟಿಸಿದರು. ಬಳಿಕ ಜಿಲ್ಲಾ ನಿರ್ಮಿತಿ ಕೇಂದ್ರದ ನೂತನ ಕಟ್ಟಡದ ಗುಣಮಟ್ಟ, ವಿನ್ಯಾಸ, ಕಚೇರಿಯ ಕೊಠಡಿಗಳು, ಮುಂಭಾಗದ ಉದ್ಯಾನವನ ವೀಕ್ಷಿಸಿದ ಸಚಿವರು, ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ…

Read More

ಡ್ರಗ್ಸ್ ದಂದೆ ತಡೆಯಲು ಮತ್ತು ಯುವ ಸಮೂಹವನ್ನು ಮಾದಕ ವಸ್ತಗಳ ಜಾಲದಿಂದ ದೂರವಿಡಲು ಎಲ್ಲರ ಸಹಕಾರವು ಬೇಕು :ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ನಾರ್ಕೋ (ಎನ್- ಕೊರ್ಡ್) ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭುವಹಿಸಿ, ಮಾತನಾಡಿದರು. ಡ್ರಗ್ಸ್ ದಂದೆ ತಡೆಯಲು ಮತ್ತು ಯುವ ಸಮೂಹವನ್ನು ಮಾದಕ ವಸ್ತಗಳ ಜಾಲದಿಂದ ದೂರವಿಡಲು ಎಲ್ಲರ ಸಹಕಾರವು ಬೇಕು. ವಿಶೇಷವಾಗಿ ವಿದ್ಯಾರ್ಥಿಗಳ, ಪಾಲಕರ ಮತ್ತು ಶಿಕ್ಷಕರ ಮಧ್ಯದಲ್ಲಿ ಉತ್ತಮ ಸಂಪರ್ಕ ಮತ್ತು ಸಮನ್ವಯ ಸಾಧಿಸಬೇಕು. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭದಲ್ಲಿ ಪ್ರತಿ ಶಾಲಾ ಕಾಲೇಜುಗಳಲ್ಲಿ ನೂತನ ವಿದ್ಯಾರ್ಥಿಗಳಿಗೆ ಆಯೋಜಿಸುವ ಸ್ವಾಗತ ಸಮಾರಂಭದಲ್ಲಿ ವಿದ್ಯಾರ್ಥಿ…

Read More

ಕಲಘಟಗಿ ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಡಿಸಿ, ಸಿಇಓ ಭೇಟಿ ನೀಡಿ ಪರಿಶೀಲನೆ

ಧಾರವಾಡ ಮಾ.29:ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಷಿಕ ಪರೀಕ್ಷೆ-1 ರ ನಾಲ್ಕನೇಯ ಪರೀಕ್ಷೆಯಾದ ಇಂದು ಸಮಾಜ ವಿಜ್ಞಾನ ಪರೀಕ್ಷೆಯು ಜಿಲ್ಲೆಯಾದ್ಯಂತ ಶಾಂತ ರೀತಿಯಿಂದ ಸುಸೂತ್ರವಾಗಿ ಜರುಗಿತು. ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಇಂದು ಬೆಳಿಗ್ಗೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ವಿದ್ಯಾರ್ಥಿಗಳ ಹಾಜರಾತಿ, ಗೈರು ಮಾಹಿತಿ ಪಡೆದರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಧಾರವಾಡ ತಾಲೂಕಿನ ಯರಿಕೊಪ್ಪ, ಕಲಘಟಗಿ ಪಟ್ಟಣದ ಸೇಂಟ್ ಮೇರಿ ಇಂಗ್ಲೀಷ…

Read More

ಕ್ಷೇತ್ರ ಮಟ್ಟದಲ್ಲಿನ ಅಧಿಕಾರಿ ಸಿಬ್ಬಂದಿಗಳು ಕಂದಾಯ ಇಲಾಖೆ ಸೈನಿಕರು;ಬಾಕಿ ಇರುವ ಸೌಲಭ್ಯ ನೀಡಲು ಬದ್ಧ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ನೌಕರರಿಗೆ ಕಾಲಮಿತಿ ಬಡ್ತಿ ಆದೇಶ ಪತ್ರಗಳನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭುವಿತರಿಸಿ, ಮಾತನಾಡಿದರು. ಕಂದಾಯ ಇಲಾಖೆಗೆ ಇಡೀ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಸ್ಥಾನವಿದ್ದು, ಮಾತೃ ಇಲಾಖೆ ಆಗಿದೆ. ಇಲಾಖೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರ ಕ್ಷೇಮ, ಸಂತೋಷ ಮುಖ್ಯವಾಗಿದೆ. ಎಲ್ಲರೂ ಸಂತೋಷದಿಂದ ಕೆಲಸ ಮಾಡಿದರೆ ನಿಷ್ಪಕ್ಷಪಾತವಾಗಿ, ತ್ವರಿತವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ತಮ್ಮ ಬೇಡಿಕೆಗಳಲ್ಲಿ ಜಿಲ್ಲಾ ಹಂತದ ಪರಿಹರಿಸುವ ಪ್ರಕರಣಗಳನ್ನು ಆದ್ಯತೆ ಮೇಲೆ ವಿಲೇವಾರಿ ಮಾಡಲಾಗುತ್ತದೆ ಎಂದು ಹೇಳಿದರು….

Read More

ಶುದ್ಧ ಕುಡಿಯುವ ಪೂರೈಕೆಗೆ ಕ್ರಮ ವಹಿಸಬೇಕು: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ಅವರು ಮಾತನಾಡಿದರು. ಸ್ಥಳೀಯ ಸಂಸ್ಥೆಗಳು ಬೇಸಿಗೆಯಲ್ಲಿ ಕುಡಿಯುವ ನೀರನ್ನು ಒದಗಿಸಲು ಅಗತ್ಯವಿರುವ ಅನುದಾನವನ್ನು ಮೀಸಲಿರಿಸಬೇಕು. ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿಗಳು ನಿರಂತರ ಸಭೆ ನಡೆಸಿ, ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು ಎಂದು ಸೂಚನೆ ನೀಡಿದರು. ಅಥಣಿ ಭಾಗದಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕಿಂತ ಹೆಚ್ಚಿದೆ. ನೀರು ಕಡಿಮೆಯಾಗಿರುವ ಜಲಾಶಯ ಮಟ್ಟವನ್ನು ಪರಿಶೀಲಿಸಿ ಅಗತ್ಯ ಪ್ರದೇಶಗಳಲ್ಲಿ ನೀರು…

Read More

ನರೇಗಾ ಕೂಲಿ ದಿನಕ್ಕೆ 349 ರಿಂದ 370 ಕ್ಕೆ ಹೆಚ್ಚಳ ಏಪ್ರಿಲ್ -01 ರಿಂದ ಜಾರಿ :ಜಿ.ಪಂ. ಸಿ.ಇ.ಒ ರಾಹುಲ್ ಶಿಂಧೆ

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವ ಅಕುಶಲ ಕೂಲಿಕಾರರಿಗೆ ಏ.01 ರಿಂದ ಪರಿಷ್ಕೃತ ಕೂಲಿ ಮೊತ್ತ 349 ರಿಂದ 370 ಕ್ಕೆ ಹಚ್ಚಳ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಸಿ.ಇ.ಒ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ. ನರೇಗಾ ಯೋಜನೆಯಡಿ ಪ್ರತಿ ದಿನ ಕೆಲಸಕ್ಕೆ ಗಂಡು ಹೆಣ್ಣಿಗೆ ಸಮಾನ ಕೂಲಿ ವೇತನ 370 ಕ್ಕೆ ಹೆಚ್ಚಳ ಮಾಡಲಾಗಿದೆ. ಒಂದು ಆರ್ಥಿಕ ವರ್ಷದಲ್ಲಿ 100 ದಿನ ಕೆಲಸ ಮಾಡಿ 37 ಸಾವಿರ ರೂ….

Read More

ಮಹಿಳೆಯರಿಗಾಗಿ ಕಾನೂನುಗಳು ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅಕ್ಕನ ಬಳಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಶ್ರೀ. ಮಹಾಂತ ದುರದುಂಡೇಶ್ವರ ಮಠ, ಯರಗಟ್ಟಿಯಲ್ಲಿ ಹವ್ಮಿುಕೊಳ್ಳಲಾಗಿತ್ತು. ಉಪನ್ಯಾಸ ಭಾಷಣ ಮಾಡಿದ ನ್ಯಾಯವಾದಿಗಳಾದ ಶ್ರೀ. ಆರ್.ಎಸ್. ಆಲದಕಟ್ಟಿ, ರವರು ಮಾತನಾಡಿ ಪ್ರತಿವರ್ಷ ಮಾರ್ಚ್‌ 8 ರಂದೇ ಮಹಿಳಾ ದಿನ ಆಚರಣೆ ಮಾಡಲಾಗುವುದು ಲಿಂಗಾಧಾರಿತ ದೃಷ್ಠಿಕೋನವು ಮಾನವ ಅಭಿವೃದ್ಧಿಯಲ್ಲಿ ಮಹಿಳೆಯರಿಗೆ ನೀಡಿರುವ ಪರಸ್ಪರ ಸ್ಥಾನಮಾನವನ್ನು ವಿವಿಧ ಅಭಿವೃದ್ಧಿ ಸೂಚ್ಯಾಂಕಗಳಾದ ಶಿಕ್ಷಣ,…

Read More

ಕಲ್ಲೂರು ಗ್ರಾಮದ ಹಳ್ಳದಲ್ಲಿ ಅಕ್ರಮ ಮರಳು ಜಪ್ತಿ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕಲ್ಲೂರು ಗ್ರಾಮದಲ್ಲಿ ಅಕ್ರಮವಾಗಿ ಹಳ್ಳದ ಉಸುಕನ್ನು ಸಂಗ್ರಹಿಸಿಕೊಂಡು ರಾತ್ರಿ ಹೊತ್ತು ಟ್ರಿಪ್ಪರ್ ಹಾಗೂ ಟ್ರ್ಯಾಕ್ಟರ್ ಮೂಲಕ ಬೇರೆ ಕಡೆ ಸಾಗಿಸುತ್ತಿದ್ದರು ಇದರ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಜಂಟಿಯಾಗಿ ಕಲ್ಲೂರು ಗ್ರಾಮದ ಹಳ್ಳದ ಅಕ್ರಮ ಮರಳು ತುಂಬುವ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಸಂಗ್ರಹಿಸಿ ಇಟ್ಟಂತ ಅಕ್ರಮ ಮರಳನ್ನು ಜಪ್ತಿ ಮಾಡಿದರು.

Read More