ಧಾರಡವಾಡದಲ್ಲಿ ಅಮೃತ ಸ್ಟೇಷನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿ
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಧಾರವಾಡದಿಂದ ಅಮೃತ್ ಸ್ಟೇಷನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಮುನಿರಾಬಾದ್, ಬಾಗಲಕೋಟೆ, ಗದಗ, ಗೋಕಾಕ್ ರಸ್ತೆ ಮತ್ತು ಧಾರವಾಡ ಸೇರಿದಂತೆ ದೇಶದಲ್ಲಿ 103 ಅಮೃತ್ ನಿಲ್ದಾಣಗಳನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ರಾಜ್ಯಪಾಲರು, ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023-24ನೇ ಸಾಲಿನಲ್ಲಿ ಅಮೃತ್ ರೈಲು ನಿಲ್ದಾಣ ಯೋಜನೆಯಡಿ 1000 ಕ್ಕೂ ಹೆಚ್ಚು ನಿಲ್ದಾಣಗಳ ಪುನರಾಭಿವೃದ್ಧಿ…
