ಅಕ್ರಮ ಪಡಿತರ ಅಕ್ಕಿ ಜಪ್ತಿ ವೇಳೆಯಲ್ಲಿ ಮಾಧ್ಯಮದವರಿಗೆ ಧಮಕಿ ಹಾಕಿದ ಸಚಿನ್ ಕಬ್ಬೂರು
ಹಾವೇರಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಮಾರಾಟ ರಾಜಾರೋಷವಾಗಿ ಪಡಿತರ ಅಕ್ಕಿ ಸಂಗ್ರಹ ಮಾಡುತ್ತಿದ್ದಾರೆ. ಜಿಲ್ಲೆಯ ಬಹುತೇಕ ಕಡೆ ನ್ಯಾಯಬೆಲೆ ಅಂಗಡಿಗಳ ಪಕ್ಕದಲ್ಲೇ ಕಾಳಸಂತೆ ಅಂಗಡಿಗಳು ಓಪನ್ ಆಗಿವೆ. ಪಡಿತರ ಅಕ್ಕಿ ಕಾಳಸಂತೆಕೋರರ ಬಗ್ಗೆ ವರದಿ ಮಾಡಲು ಮಾಧ್ಯಮ ಪ್ರತಿನಿಧಿಗಳು ಸ್ಥಳಕ್ಕೆ ಹೋಗಿದ್ದರು. ಈ ವೇಳೆ ಅಕ್ಕಿ ದಂಧೆ ಕೋರೋರು ದಮಕಿ ಹಾಕಿ ದರ್ಪ ಮೆರೆದಿದ್ದಾರೆ. ಹಾವೇರಿ ನಗರದ ಅಕ್ಕಿಪೇಟೆಯ ಬಸವರಾಜ ಹಂದ್ರಾಳ ಎಂಬುವವರ ಮನೆಯಲ್ಲಿ ಅನ್ನಭಾಗ್ಯ ಅಕ್ಕಿ ಸಂಗ್ರಹ ಮಾಡಲಾಗಿದೆ. ಈ ಬಗ್ಗೆ ವರದಿ ಮಾಡಲು ಹೋಗಿದ್ದ…
