ಬೆಳಗಾವಿಯಲ್ಲಿ ಒಂದೇ ದಿನ 126 ಬೈಕ್‌ಗಳ ವಿರುದ್ಧ ಕೇಸ್, ಸ್ಥಳದಲ್ಲೇ 63,000 ದಂಡ ಸಂಗ್ರಹ.
ಬೆಳಗಾವಿ ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಈಗ ಹದ್ದಿನ ಕಣ್ಣಿಟ್ಟಿದ್ದಾರೆ. ಅದರಲ್ಲೂ ಪ್ರಮುಖವಾಗಿ ನಂಬರ್ ಪ್ಲೇಟ್ ಇಲ್ಲದೆ ಅಥವಾ ದೋಷಪೂರಿತ ನಂಬರ್ ಪ್ಲೇಟ್ ಅಳವಡಿಸಿಕೊಂಡು ರಾಜಾರೋಷವಾಗಿ ಓಡಾಡುವ ಕಿಡಿಗೇಡಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ಹೊರಡಿಸಲಾದ ಪ್ರಕಟಣೆಯಂತೆ, ನಗರ ವ್ಯಾಪ್ತಿಯಲ್ಲಿ ನಂಬರ್ ಪ್ಲೇಟ್ ಇಲ್ಲದ ಮತ್ತು ನಿಯಮಬಾಹಿರವಾಗಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿದ್ದ ವಾಹನಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಲಾಗಿದೆ. ಒಟ್ಟು 126 ದ್ವಿಚಕ್ರ ವಾಹನಗಳ ಮೇಲೆ ಮೋಟಾರು ವಾಹನ…
