ಬೆಳಗಾವಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಶಹಾಪುರ, ಉದ್ಯಮಭಾಗ, ಟಿಳಕವಾಡಿ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ 7 ಸಿಸಿ ಕ್ಯಾಮರಾಗಳು ಚಾಲನೆಯಲಿಲ್ಲ. ಕೂಡಲೇ ತಾಂತ್ರಿಕ ಸಿಬ್ಬಂದಿಗಳಿಗೆ ಕ್ಯಾಮೆರಾ ಸರಿಪಡಿಸಲು ಸೂಚಿಸಬೇಕು ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ತಿಳಿಸಿದರು. ಚನ್ನಮ್ಮ ವೃತ್ತದ ಬಳಿಯ ಜಿಲ್ಲಾ ಗ್ರಂಥಾಲಯ, ಜಿಲ್ಲಾ ಪಂಚಾಯತ್ ಕಚೇರಿಯ ಸುತ್ತ ಮುತ್ತಲಿನಲ್ಲಿ ಸಾಕಷ್ಟು ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ. ಪಾರ್ಕಿಂಗ್ ಸ್ಥಳ…
