ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು.
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಅಪಘಾತಗಳ ತಡೆಗೆ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅತೀ ಮುಖ್ಯ. ನಗರದಲ್ಲಿ ಸಂಚಾರ ವ್ಯವಸ್ಥೆ ಉತ್ತಮ ನಿರ್ವಹಣೆಯಾಗುವಂತೆ ಸುರಕ್ಷತಾ ಆಧಾರದ ಮೇಲೆ ಕ್ರಿಯಾ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಪೊಲೀಸ್, ಸಾರಿಗೆ, ಲೋಕೋಪಯೋಗಿ ಇಲಾಖೆಗಳು ರಸ್ತೆಗಳಲ್ಲಿ ಸಂಚಾರ ಸುಗಮವಾಗಿ ಸಾಗುವಂತೆ ನೋಡಿಕೊಳ್ಳಲು ಅಗತ್ಯವಿರುವ ಎಲ್ಲಾ…
