ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಭಾಷೆ ನಿರಂತರ ಬಳಕೆಗೆ ಆದ್ಯತೆ ನೀಡಬೇಕು: ಡಾ. ಪುರುಷೋತ್ತಮ ಬಿಳಿಮಲೆ
ಬೆಳಗಾವಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನುಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ ಎಲ್ಲ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಇರಬೇಕು. ಆದರೆ ನಗರದಲ್ಲಿ ಸರ್ಕಾರದ ಈ ನಿಯಮ ಸರಿಯಾಗಿ ಪಾಲನೆಯಾಗಿಲ್ಲ ಎಂಬುವುದು ಕಂಡುಬರುತ್ತಿದೆ. ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯು ಈ ಕುರಿತು ಕ್ರಮವಹಿಸಬೇಕು ಎಂದರು. ಎಲ್ಲ ಪ್ರಕಾರದ ಅಂಗಡಿ, ಮುಗ್ಗಟ್ಟುಗಳ ಹಾಗೂ…
