ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲಿ ಭಾನುವಾರ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ ಸರಕಾರದ ಮಾರ್ಗಸೂಚಿ ಪ್ರಕಾರ ಪುನರ್ವಸತಿಯನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಅಭಯಾರಣ್ಯದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್ ಮತ್ತಿತರ ಮೂಲಸೌಕರ್ಯಗಳನ್ನು ಕಲ್ಪಿಸುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಳೇವಾಡಿ ಗ್ರಾಮದ ಜನರು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣವೇ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು….
