ಜಿಲ್ಲಾಮಟ್ಟದ ರಸ್ತೆ ಸುರಕ್ಷಾ ಸಮಿತಿ ಸಭೆ
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾಮಟ್ಟದ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ದೇಶದಾದ್ಯಂತ ಅಪಘಾತ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಿರಂತರ ನಿಗಾ ವಹಿಸಿರುತ್ತದೆ. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗುವುದರ ಜತೆಗೆ ತಮಗೆ ನಿಗದಿಪಡಿಸಿದ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಲು ತಿಳಿಸಿದರು. ಯಮನಾಪುರ ಹತ್ತಿರದ ರಾಷ್ಟ್ರೀಯ ಹೆದ್ದಾರಿ, ನಗರದ ಗೋಗಟೆ ವೃತ್ತ ಹಾಗೂ ಕಾಲೇಜು ರಸ್ತೆಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿವೆ….
