Prashanth Angadi

ರಾಮದುರ್ಗ ಮಳೆರಾಜ ಮಠದ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳ ವಿವರ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸುಕ್ಷೇತ್ರ ಮಳೆರಾಜ ಮಠದ ಜಾತ್ರಾ ಮಹೋತ್ಸವದ ಕಾರ್ಯಕ್ರಮವು ಅಗಸ್ಟ್ 11-2025 ರಿಂದ ಅಗಸ್ಟ್ 15-2025 ರವರೆಗೆ ಜರಗಲಿದೆ. ಶ್ರೀ ಅಭಿನವ ಸದಾಶಿವ ಮಹಾಸ್ವಾಮಿಗಳ ಮಳೆರಾಜ ಮಠ, ರಾಮದುರ್ಗ ಇವರ ಸಯುಕ್ತ ಆಶ್ರಯದಲ್ಲಿ ಶ್ರಾವಣ 3ನೇ ಸೋಮವಾರ ಅಗಸ್ಟ್ 11 ರಂದು ತೆಪ್ಪದ ತೇರಿನ ಉತ್ಸವ, ಅಗಸ್ಟ್ 12ರಂದು ಸಣ್ಣ ಕುಸ್ತಿ,ಅಗಸ್ಟ್ 13ರಂದು ಕುಸ್ತಿ, ಅಗಸ್ಟ್ 14ರಂದು ದೊಡ್ಡ ಕುಸ್ತಿ, ಅಗಸ್ಟ್ 15 ರಂದು ಕಳಸಾರೋಹಣ ಮತ್ತು ವಾಣಿ ಕಾರ್ಯಕ್ರಮ ಜರಗುವುದು.

Read More

ಲೋಕಾಯುಕ್ತ ಪ್ರಕರಣಗಳ ವಿಲೇವಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಬುಧವಾರ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಲೋಕಾಯುಕ್ತ ಪ್ರಕರಣಗಳ ವಿಲೇವಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಗೌರವಾನ್ವಿತ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ವಹಿಸಿ ಅವರು ಮಾತನಾಡಿದರು. ಬೆಳಗಾವಿ ರಾಜ್ಯದ ಅತಿ ಹೆಚ್ಚು ವಿಸ್ತೀರ್ಣ ಹೊಂದಿದ ದೊಡ್ಡ ಜಿಲ್ಲೆಯಾಗಿದ್ದು, ಆಡಳಿತಾತ್ಮಕವಾಗಿ ಸುಧೀರ್ಘವಾದ ಕ್ಷೇತ್ರವಾಗಿದೆ. ಜಿಲ್ಲೆಯನ್ನು ಮಾದರಿ, ಭ್ರಷ್ಟಾಚಾರ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು.ಸರಕಾರವು ಜನಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು…

Read More

ರೈಲು ಹೋರಾಟ ಸಮಿತಿ ರಾಮದುರ್ಗ ವತಿಯಿಂದ ಆಗಷ್ಟ 11 ರಂದು ಉಪವಾಸ ಸತ್ಯಗ್ರಹ : ಬಿ ಯು ಭೈರಕದಾರ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ನ್ಯಾಷನಲ್ ಹ್ಯೂಮನ್ ರೈಟ್ಸ್ ರಾಜ್ಯ ಅಧ್ಯಕ್ಷ, ರೈಲು ಹೋರಾಟ ಸಮಿತಿ ರಾಮದುರ್ಗ ಅಧ್ಯಕ್ಷರಾದ ಬಿ ಯು ಭೈರಕದಾರ   ಮಾತನಾಡಿದ ಅವರು ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಒತ್ತಾಯಿಸಿ   ರೈಲು ಹೋರಾಟ ಸಮಿತಿ ರಾಮದುರ್ಗ ಹಾಗೂ ವಿವಿಧ ಸಂಘಟನೆಗಳ ವೇದಿಕೆ ವತಿಯಿಂದ ಆಗಷ್ಟ 11 2025 ಸೋಮವಾರ ರಂದು ತಾಲೂಕು ಆಡಳಿತ ಭವನ ಮಿನಿ ವಿಧಾನಸೌಧದ ಮುಂದೆ  ಉಪವಾಸ ಸತ್ಯಗ್ರಹ ಪ್ರಾರಂಭಿಸಲಾಗುವುದು  ಹಾಗೂ ನಾವು ಸುಮಾರು ವರ್ಷಗಳಿಂದ ನಮ್ಮ ಮಾನವ…

Read More

ಆ.8ರಿಂದ ಬೆಟಗೇರಿ ವೀರಭದ್ರೇಶ್ವರ ದೇವರ ಜಾತ್ರಾಮಹೋತ್ಸವ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಹಾಗೂ ಶ್ರಾವಣ ಮಾಸದ ಪ್ರಯುಕ್ತ ಆಗಷ್ಟ 8 ಮತ್ತು 9ರಂದು ಇಲ್ಲಿಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ನಡೆಯಲಿದೆ.ಆ.8ರಂದು ಇಲ್ಲಿಯ ಶ್ರೀ ವೀರಭದ್ರೇಶ್ವರ ದೇವರ ದೇವಾಲಯದ ವೀರಭದ್ರೇಶ್ವರ ದೇವರ ಗದ್ಗುಗೆ ಪೂಜೆ, ನೈವೇದ್ಯ ಸಮರ್ಪನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ರಾತ್ರಿ 8 ಗಂಟೆಗೆ ಜೀ ಕನ್ನಡ ಸರಿಗಮಪ ಖ್ಯಾತಿಯ ಶ್ರೀಮತಿ ಸುಜಾತಾ ಕಲ್ಮೇಶ ಹಾಗೂ ತಂಡದವರಿಂದ ಸುಗಮ ಸಂಗೀತ, ವಿವಿಧ ಭಜನಾ…

Read More

ಮಕ್ಕಳ ಸಕಾರಾತ್ಮಕ ಬೆಳವಣಿಗೆಗೆ ಕಲಾ ಪ್ರತಿಭೆ ಕಾರ್ಯಕ್ರಮಗಳು ಅಗತ್ಯ: ರಾಮನಗೌಡ ಕನ್ನೋಳ್ಳಿ

ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶನಿವಾರ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆದ “ಚಿಗುರು 2025-26” ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ ಅವರು ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಮಕ್ಕಳ ಕಲಾ ಪ್ರತಿಭೆ ಸಹಜವಾಗಿರುತ್ತದೆ, ಶಿಕ್ಷಣದ ಮೂಲಕ ಅದನ್ನು ಬೆಳೆಸಬೇಕು.ಕಲಾ ಅಭಿವ್ಯಕ್ತಿಯ ಮೂಲಕ ಮಗು ತನ್ನ ಭಾವನೆಗಳನ್ನು ಹೊರಹಾಕುತ್ತೆ. ಕಲೆಯು ಮಕ್ಕಳ ಒಳಗಿನ ಆತ್ಮಸೌಂದರ್ಯವನ್ನು ಬೆಳಗಿಸುತ್ತದೆ ಎಂದರು. 8 ರಿಂದ 14 ವರ್ಷದ ಒಳಗಿನ ಮಕ್ಕಳಲ್ಲಿರುವ…

Read More

ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿಯ ಶಾಲೆಯ 6ನೇ ತರಗತಿಯ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಡ್ರಾವಿಯ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿಯ ಶಾಲೆಯ 6ನೇ ತರಗತಿಯ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಆರ್ ಎಫ್ ಮಾಘಿ ವಹಿಸಿಕೊಂಡಿದ್ದರು ಅತಿಥಿಗಳಾಗಿ ಎಸ್ ಡಿ ಎಂ ಸಿ ಯ ಅಧ್ಯಕ್ಷರಾದ ಸುರೇಶ್ ಎಸ್ ಕಾಳಪ್ಪನವರ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಸುಕನ್ಯಾ ಬೀಳಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಎಸ್‌ ಡಿ ಎಂ ಸಿ ಯ ಸದಸ್ಯರಾದ ಶ್ರೀ ಮಂಜುನಾಥ್ ಪಾಟೀಲ್ ಶ್ರೀ ಶಿವನಗೌಡ…

Read More

ರೈಲು ಹೋರಾಟ ಸಮಿತಿ ರಾಮದುರ್ಗ ವತಿಯಿಂದ ಆಗಷ್ಟ 11 ರಂದು ಉಪವಾಸ ಸತ್ಯಗ್ರಹಕ್ಕೆ ಪೂರ್ವಭಾವಿ ಸಭೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಆಡಳಿತ ಸೌಧದ ಹತ್ತಿರರುವ ಪ್ರವಾಸಿ ಮಂದಿರದಲ್ಲಿ ರಾಮದುರ್ಗ ರೈಲ್ವೆ ಮಾರ್ಗಕ್ಕೆ ಉಪವಾಸ ಸತ್ಯಗ್ರಹಕ್ಕೆ ರೈಲು ಹೋರಾಟ ಸಮಿತಿ ಅಧ್ಯಕ್ಷ   ಬಿ ಯು ಭೈರಕದಾರ  ಅವರ ಅಧ್ಯಕ್ಷತೇಯಲ್ಲಿ ಪೂರ್ವಭಾವಿ  ಸಭೆ ಜರಗಿತು. ಈ ಪೂರ್ವಭಾವಿ  ಸಭೆಯಲ್ಲಿ ರಾಮದುರ್ಗ ರೈಲ್ವೆ ಮಾರ್ಗಕ್ಕೆ ರಾಮದುರ್ಗದ ಎ ಆರ್ ಪಠಾಣ, ಡಿ ಎಫ್ ಹಾಜಿ, ಶಶಿಕಾಂತ್ ನೇಲೂರ್ ,ಶಿವಾನಂದ ಮಿಲಾನಿ, ಲಕ್ಶ್ಮಣ. ರಾಯಬಾಗ  ತಮ್ಮ ತಮ್ಮ ಅಭಿಪ್ರಾಯ ತಿಳಿಸಿದರು. ರೈಲು ಹೋರಾಟ ಸಮಿತಿ ಅಧ್ಯಕ್ಷ  ಬಿ ಯು ಬೈರಕದಾರ್ ಎಲ್ಲರ ಅಭಿಪ್ರಾಯ ಕೇಳಿ ನಂತರ್…

Read More

ಜಿಲ್ಲಾ ಮಟ್ಟದ ವಿವಿಧ‌ ಇಲಾಖೆಗಳ ಪ್ರಗತಿ‌ ಪರಿಶೀಲನಾ‌ ಸಭೆ

ಬೆಳಗಾವಿ ಜಿಲ್ಲಾ‌ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ‌ ಇಲಾಖೆಗಳ ಪ್ರಗತಿ‌ ಪರಿಶೀಲನಾ‌ ಸಭೆಯ ಅಧ್ಯಕ್ಷತೆಯನ್ನು ವಾಣಿಜ್ಯ ತೆರಿಗೆ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಲ್ ವಹಿಸಿ ಮಾತನಾಡಿದರು.ಅನುದಾನಿತ ಶಾಲೆಗಳಲ್ಲಿಯೂ ಸಹ ಪರೀಕ್ಷಾ ಫಲಿತಾಂಶ ಕುಂಠಿತವಾಗಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ಅನುದಾನಿತ ಶಾಲೆಗಳಲ್ಲಿ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಮುಂಗಾರು ಉತ್ತಮವಾಗಿದ್ದು, ರೈತರಿಗೆ ಅಗತ್ಯದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಆಗದಂತೆ ನಿಗಾವಹಿಸಬೇಕು. ಮುಂಗಾರು ಹಂಗಾಮು…

Read More

ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ‌ ಪ್ರಥಮ‌‌ ಮೇಲ್ಮನವಿ ಪ್ರಾಧಿಕಾರಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಅಧಿನಿಯಮ‌ ಕಾಯ್ದೆ ತರಬೇತಿ ಕಾರ್ಯಕ್ರಮ

ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಗುರುವಾರ ಜರುಗಿದ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ‌ ಪ್ರಥಮ‌‌ ಮೇಲ್ಮನವಿ ಪ್ರಾಧಿಕಾರಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಅಧಿನಿಯಮ‌ ಕಾಯ್ದೆ ತರಬೇತಿ ಕಾರ್ಯಕ್ರಮದ‌ ಅಧ್ಯಕ್ಷತೆಯನ್ನು ರಾಜ್ಯ ಮುಖ್ಯ ಮಾಹಿತಿ‌ ಆಯುಕ್ತರಾದ ಎ.ಎಂ.ಪ್ರಸಾದ ವಹಿಸಿ ಅವರು ಮಾತನಾಡಿದರು. ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಭ್ರಷ್ಟಾಚರ ನಿವಾರಣೆಗಾಗಿ‌ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು. ಮಾಹಿತಿ ಹಕ್ಕು‌ಕಾಯ್ದೆಯಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸುವ ಅರ್ಜಿದಾರರಿಗೆ ಕಾಲಮಿತಿಯೊಳಗೆ ಮಾಹಿತಿ ಒದಗಿಸುವುದು ಸಾರ್ವಜನಿಕ ಮಾಹಿತಿ ಅಧಿಕಾರಿಯ ಕರ್ತವ್ಯವಾಗಿದೆ ಎಂದು ರಾಜ್ಯ…

Read More

ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು.

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಅಪಘಾತಗಳ ತಡೆಗೆ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅತೀ ಮುಖ್ಯ. ನಗರದಲ್ಲಿ ಸಂಚಾರ ವ್ಯವಸ್ಥೆ ಉತ್ತಮ ನಿರ್ವಹಣೆಯಾಗುವಂತೆ ಸುರಕ್ಷತಾ ಆಧಾರದ ಮೇಲೆ ಕ್ರಿಯಾ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಪೊಲೀಸ್, ಸಾರಿಗೆ, ಲೋಕೋಪಯೋಗಿ ಇಲಾಖೆಗಳು ರಸ್ತೆಗಳಲ್ಲಿ ಸಂಚಾರ ಸುಗಮವಾಗಿ ಸಾಗುವಂತೆ ನೋಡಿಕೊಳ್ಳಲು ಅಗತ್ಯವಿರುವ ಎಲ್ಲಾ…

Read More