ಜೆಎನ್ಎಂಸಿ ವಿದ್ಯಾರ್ಥಿನಿಯರ ಜತೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸಂವಾದ
ಬೆಳಗಾವಿ ಕೆ.ಎಲ್.ಇ. ಸಂಸ್ಥೆಯ ಜವಾಹರಲಾಲ್ ನೆಹರೂ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು, ಮಹಿಳೆಯರ ಸಮಸ್ಯೆಗಳು ಮತ್ತು ಅವುಗಳನ್ನು ಎದುರಿಸುವ ವಿಧಾನಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿನಿಯರು ಹಾಗೂ ಮಹಿಳಾ ಬೋಧಕಿಯರಿಗೆ ಕರ್ತವ್ಯ ನಿರ್ವಹಿಸುವಾಗ ಎದುರಾಗುವ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಅವರು, ಲೈಂಗಿಕ ದೌರ್ಜನ್ಯ ಸೇರಿದಂತೆ ಯಾವುದೇ ಸಮಸ್ಯೆಗಳು ಎದುರಾದರೆ ತಕ್ಷಣವೇ ಪೊಲೀಸ್ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು.ಒಂದು ವೇಳೆ ಸ್ಥಳೀಯವಾಗಿ…
