ಅನರ್ಹರು ಪಡೆದ ಬಿಪಿಎಲ್ ಪಡಿತರ ಚೀಟಿ ಹಿಂದಿರುಗಿಸಲು ಆಗಸ್ಟ್ 31 ಕೊನೆಯ ದಿನ: ತಪ್ಪಿದಲ್ಲಿ ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ.
ಧಾರವಾಡ ಆದ್ಯತಾ ಕುಟುಂಬ ಪಡಿತರ ಚೀಟಿ ಬಿಪಿಎಲ್ ಹೊಂದಿರುವ ಮಾನದಂಡಗಳ ಕುರಿತು ಮಾರ್ಚ 25, 2017 ರಲ್ಲಿ ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ತಿಳಿಸಿರುವಂತೆ, ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಲು ಅರ್ಹತೆಯನ್ನು ಹೊಂದಿರುವುದಿಲ್ಲವೆಂದು ಸ್ಪಷ್ಟಪಡಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಧಾರವಾಡ ಜಂಟಿ…
