ಕಾಂಗ್ರೆಸ್ ಸರ್ಕಾರದ ಕೊನೆಯದಾದ ಮಹತ್ವಾಕಾಂಕ್ಷೆಯ ಪಂಚಖಾತ್ರಿ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು
ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು. ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ. ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ…
