ನಮ್ಮ ಶಾಲೆ-ನಮ್ಮ ಜವಾಬ್ದಾರಿ ಶಾಲಾ ಪ್ರಾರಂಭೋತ್ಸವ ದಿನ ಪಠ್ಯಪುಸ್ತಕ ವಿತರಣೆಗೆ ಸೂಚನೆ
ಸರಕಾರದಿಂದ ಸರಬರಾಜು ಮಾಡಲಾಗಿರುವ ಶಾಲಾ ಸಮವಸ್ತ್ರ, ಪಠ್ಯಪುಸ್ತಕಗಳನ್ನು ಮೇ 29 ರಂದು ನಡೆಯಲಿರುವ ಶಾಲಾ ಪ್ರಾರಂಭೋತ್ಸವದ ದಿನ ವಿತರಣೆ ಮಾಡಬೇಕು. ಪ್ರತಿ ನಾಲ್ಕನೇ ಶನಿವಾರ ಕಡ್ಡಾಯವಾಗಿ ಪಾಲಕರ ಸಭೆಯನ್ನು ನಡೆಸಿ ಅವರ ಸಹಕಾರದಿಂದ ಮಕ್ಕಳ ದಾಖಲಾತಿ, ಹಾಜರಾತಿಯನ್ನು ಕಲಿಕೆಗೆ ಸಮನ್ವಯ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ನಿರ್ದೇಶನ ನೀಡಿದರು. ಬೆಳಗಾವಿ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ಜರುಗಿದ “ನಮ್ಮ ಶಾಲೆ-ನಮ್ಮ ಜವಾಬ್ದಾರಿ” ಶಾಲಾ ಪ್ರಾರಂಭೋತ್ಸವ ಹಾಗೂ 2025-26 ನೇ ಸಾಲಿನ…
