ಡಾ| ಬಾಬು ಜಗಜೀವನರಾಮ್ ಹಾಗೂ ಅಂಬೇಡ್ಕರ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿದರು.
ರಾಮದುರ್ಗ ಏ.5 ರಂದು ಡಾ| ಬಾಬು ಜಗಜೀವನ್ರಾಮ್ ಹಾಗೂ ಸಂವಿಧಾನಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ ಜಯಂತಿಯನ್ನು ಏ.14 ರಂದು ತಾಲೂಕಾಡಳಿತ ಹಾಗೂ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲು ರಾಮದುರ್ಗ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಏರ್ಪಡಿಸಿದ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಯಿತು.ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಸರಕಾರದ ನಿರ್ದೇಶನದಂತೆ ಎಲ್ಲಾ ಸರಕಾರಿ ಕಛೇರಿಗಳಲ್ಲಿ ಅಂಬೇಡ್ಕರ ಹಾಗೂ ಜಗಜೀವನ್ರಾಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಆಚರಣೆ ಮಾಡಿದ ನಂತರ ತಹಶೀಲ್ದಾರ ಕಾರ್ಯಾಲಯದಲ್ಲಿ…
