Prashanth Angadi

ಜಿಲ್ಲೆಯ ಮೊಟ್ಟ ಮೊದಲ ಹ್ಯಾಮ್ ಸ್ಟೇಷನ್ MDRS ಸ್ಕೂಲ್ ಬೀಳಗಿಯಲ್ಲಿ ಆರಂಭ

ಅಂತರಾಷ್ಟ್ರೀಯ ಮಟ್ಟದಲ್ಲಿ ಸಂವಹನ ಮಾಡುವಂತ ಹ್ಯಾಮ್ ಸ್ಟೇಷನ್ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆಯಲಾಗಿದೆ. ಇಲ್ಲಿನ ವಿಜ್ಞಾನ ಶಿಕ್ಷಕ ಕೃಷ್ಣಾ ಜೋಶಿ ಹಾಗೂ ಕುಮಾರಿ ರಫೀದಾ ಖಾಜಾಮೈನುದ್ದಿನ ತಹಶಿಲ್ದಾರ್ ಮತ್ತು ಕುಮಾರ್ ವಿನಯ ಬೂಸರಡ್ಡಿ ವಿದ್ಯಾರ್ಥಿಗಳು ಹ್ಯಾಮ್ ಲೈಸೆನ್ಸ್ ಪಡೆದ್ದಾರೆ, ತುರ್ತು ಸಂದರ್ಭದಲ್ಲಿ ಹಾಗೂ ಪರಿಸರದಲ್ಲಿ ಆಗುವ ಅನಾಹುತದ ಸಂದರ್ಭದಲ್ಲಿ ಸಂದೇಶ ರವಾನಿಸಲು ಉಪಯುಕ್ತವಾದ ಸಂವಹಣ ಎಂದು ವಸತಿ ಶಾಲೆಯ ಪ್ರಾಂಶುಪಾಲ ಶೇಖಪ್ಪ ಅರಸನಗಿ ಹೇಳಿದರು. ಗುರುವಾರ ಮೊರಾರ್ಜಿ ದೇಸಾಯಿ ವಸತಿ ಹ್ಯಾಮ್ ಸ್ಟೇಷನ್ ನಲ್ಲಿ…

Read More

ಪತ್ರಕರ್ತರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಕಾನಿಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಇವರ ನೇತೃತ್ವದಲ್ಲಿ ಪ್ರತಿಭಟನೆ.

ಬೆಳಗಾವಿ ಸುವರ್ಣಾ ಸೌಧದ ಮುಂಭಾಗದ ಸುವರ್ಣಾ ಗಾರ್ಡನ್ ಟೆಂಟ್ ನಂಬರ್ 6 ರಲ್ಲಿ ಕಾನಿಪ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಹಾಗೂ ವಿವಿಧ ಜಿಲ್ಲಾ ತಾಲೂಕುಗಳ ಅಧ್ಯಕ್ಷರು ಸದಸ್ಯರ ನೇತೃತ್ವದಲ್ಲಿ ಗ್ರಾಮಾಂತರ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ -ಪಾಸ್ ಹಾಗೂ ಪತ್ರಕರ್ತರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದುಪ್ರತಿಭಟನೆ ನಡೆಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿಯವರಿಗೆ ಮನವಿ ಸಲ್ಲಿಸಿದರು

Read More

ಸುಕ್ಷೇತ್ರ ಗೊಡಚಿ ಶ್ರೀ ವೀರಭದ್ರೇಶ್ವರ ಜಾತ್ರೆಯ ನಿಮಿತ್ಯ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೋಡಚಿ ಗ್ರಾಮ ಪಂಚಾಯಿತಿಯಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರೆಯ ನಿಮಿತ್ಯವಾಗಿ ಹಮ್ಮಿಕೊಂಡ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಉತ್ತರ ಕರ್ನಾಟಕದ ಧರ್ಮಸ್ಥಳವೆಂದೆ ಖ್ಯಾತಿ ಪಡೆದ ವೀರಭದ್ರೇಶ್ವರನ ಜಾತ್ರೆಗೆ ರಾಜ್ಯ ಹಾಗೂ ಮಹಾರಾಷ್ಟ ಸೇರಿದಂತೆ ವಿವಿಧ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.ಗೊಡಚಿ ವೀರಭದ್ರೇಶ್ವರ ದೇವಸ್ಥಾನವು ಧರ್ಮಸ್ಥಳ ಮಾದರಿಯಲ್ಲಿ ಅಭಿವೃದ್ಧಿಯಾಗಬೇಕು. ಅದಕ್ಕೆ ಇಲ್ಲಿಯ ಆಡಳಿತ ಮಂಡಳಿಯವರು ಮತ್ತು ಗ್ರಾಮದ ಜನರ…

Read More

ಕೋವಿಡ್ ಹಗರಣ ಸಂಬಂಧ ಎಫ್‌ಐಆರ್ ದಾಖಲಿಸದಿರುವುದು ಸೇಡಿನ ರಾಜಕಾರಣ: ಜಗದೀಶ್ ಶೆಟ್ಟರ್ ಆರೋಪ

ಮಂಡ್ಯ: ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಎಫ್‌ಐಆ‌ರ್ ದಾಖಲಿಸಿರುವುದು ಕರ್ನಾಟಕ ಸರ್ಕಾರದ ಸೇಡಿನ ರಾಜಕಾರಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ವಾಲ್ಮೀಕಿ ಕಲ್ಯಾಣ ಪ್ರಾಧಿಕಾರದಲ್ಲಿ ನಡೆದಿರುವ ಅವ್ಯವಹಾರಗಳು ಬಯಲಾಗಿದೆ. ಇದನ್ನು ಮುಚ್ಚಿಹಾಕಲು ಮತ್ತು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಸೇಡಿನ ರಾಜಕಾರಣ ಮಾಡುವ ಉದ್ದೇಶ ದಿಂದ ಮಾಜಿ ಮಂತ್ರಿಗಳು ಸೇರಿದಂತೆ ಅಧಿಕಾರಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗಿದೆ ಎಂದು ಶೆಟ್ಟ‌ರ್ ದೂರಿದ್ದಾರೆ.

Read More

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್

ಬೆಳಗಾವಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಶರಣಗೌಡ ಕಂದಕೂರ್ ಅವರು ಕೇಳಿದಂತ ಪ್ರಶ್ನೆಗೆ ಉತ್ತರಿಸಿರುವಂತ ಅವರು ರಾಜ್ಯದಲ್ಲಿ 4871 ಸರ್ಕಾರಿ ಪ್ರೌಢ ಶಾಲೆಗಳಿದ್ದಾವೆ. 11,796 ಸಹ ಶಿಕ್ಷಕರ ವಿಷಯವಾರು ಹುದ್ದೆಗಳು ಖಾಲಿ ಇದ್ಯಾವೆ ಎಂದರು. ಖಾಯಂ ಹುದ್ದೆ ಭರ್ತಿ ಆಗುವವರೆಗೂ ಅಥವಾ ಶೈಕ್ಷಣಿ ಸಾಲಿನ ಅಂತ್ಯದವರೆಗೂ ತಾತ್ಕಾಲಿಕವಾಗಿ ಅತಿಥಿ…

Read More

ಹುಬ್ಬಳ್ಳಿಯಿಂದ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ

ಹುಣ್ಣಿಮೆ ಹಾಗೂ ಅಮಾವಾಸ್ಯೆಯ ದಿನಗಳಲ್ಲಿ ಹುಬ್ಬಳ್ಳಿ ನಗರದಿಂದ ಬೆಳಗಾವಿ ಜಿಲ್ಲೆ ಸವದತ್ತಿಯ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗುವ ಭಕ್ತರಿಗೆ ಅನುಕೂಲವಾಗುವಂತೆ ವಾಯುವ್ಯ ಸಾರಿಗೆ ಸಂಸ್ಥೆಯ ವತಿಯಿಂದ ವಿಶೇಷ ಬಸ್‌ಗಳನ್ನು ಓಡಿಸುತ್ತಿರುವುದಾಗಿ ಸಾರಿಗೆ ಸಂಸ್ಥೆ ತಿಳಿಸಿದೆ.ಸವದತ್ತಿಯ ಯಲ್ಲಮ್ಮನ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಡಿಸೆಂಬರ್ 15 ರಂದು ಭಾನುವಾರ ಹುಣ್ಣಿಮೆಯಂದು ಮತ್ತು ಬರುವ ಅಮಾವಾಸ್ಯೆಯ ವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಈ ಬಗ್ಗೆ ವಾಯವ್ಯ ಕರ್ನಾಟಕ…

Read More

ಸವದತ್ತಿ ವಕೀಲರ ಪರಿಷತ್ತು ಘಟಕದ ವತಿಯಿಂದ 2 ಎ ಮೀಸಲಾತಿಗಾಗಿ ರಸ್ತೆ ತಡೆದು ಪ್ರತಿಭಟನೆ.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಎಪಿಎಂಸಿ ಚೆನ್ನಮ್ಮ ವೃತ್ತದಲ್ಲಿ 2 ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜ ಜನರು ಹಾಗೂ ಸಮಾಜದ ಮುಖಂಡರು ತಮ್ಮ ಒಂದು ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟಿಸಿದರು . ಇದರಿಂದ ಎರಡು ತಾಸು ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು ಎಲ್ಲಮ್ಮನ ದೇವಸ್ಥಾನಕ್ಕೆ ಬರುವ ಭಕ್ತರು ಸಾಕಷ್ಟು ತೊಂದರೆ ಅನುಭವಿಸಿದರು. ಸವದತ್ತಿ ಮಾರ್ಗದ ಎಲ್ಲ ರಸ್ತೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಈ ಒಂದು ಪ್ರತಿಭಟನೆ ಕಾರ್ಯಕ್ರಮದಲ್ಲಿ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ನ್ಯಾಯವಾದಿಗಳು ಎಂಬಿ…

Read More

ಗ್ರಾಮ ಪಂಚಾಯತ್ ಅಸ್ತಿಗಳ ಸಮೀಕ್ಷೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ ರಾಜ್ಯದ ಗ್ರಾಮ ಪಂಚಾಯತ್ವ್ಯಾ ಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಪರಿಷತ್ ನಲ್ಲಿಂದು ಹೇಳಿದರು. ಪ್ರಶೋತ್ತರ ಕಲಾಪದಲ್ಲಿ ಎನ್. ರವಿಕುಮಾರ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯೂಯಲ್‌ ಸಮೀಕ್ಷೆ ನಡೆಸಿ…

Read More

ಯಾದಗಿರಿ- ಆಲಮಟ್ಟಿ ರೈಲುಮಾರ್ಗ ಯೋಜನೆ ಅನುಮೋದನೆಗೆ ಮನವಿ

ರಾಯಚೂರು ಸಂಸದ ಜಿ.ಕುಮಾರ ನಾಯಕ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ನವದೆಹಲಿಯಲ್ಲಿ ಗುರುವಾರ ಭೇಟಿ ಮಾಡಿ ಆಲಮಟ್ಟಿ -ಯಾದಗಿರಿ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡುವಂತೆ ಒತ್ತಾಯಿಸಿದರು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ, ತೆಲಂಗಾಣ ಹಾಗೂ ಒಡಿಶಾದಲ್ಲಿ ರೈಲ್ವೆ ಸಂಪರ್ಕ ಜಾಲ ಕಡಿಮೆ ಇದೆ. ಈ ಲೋಪವನ್ನು ಸರಿಪಡಿಸಲು ರಾಜ್ಯದ ರೈಲು ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು. ಆಲಮಟ್ಟಿ -ಯಾದಗಿರಿ ರೈಲು ಮಾರ್ಗದ ಬೇಡಿಕೆಯು ದಶಕಗಳಷ್ಟು ಹಳೆಯದು ಎಂದು ಸಚಿವರ ಗಮನಕ್ಕೆ…

Read More

ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ನೆರವು : ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌

ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಹೇಳಿದ್ದಾರೆ. ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿಯಲ್ಲಿ ಪ್ರತಿ ತಿಂಗಳು 2,000, ಆರ್ಥಿಕ ಸಹಾಯ ಯೋಜನೆಯಡಿ 30,000ಸಹಾಯಧನ ಹಾಗೂ ಮಾಜಿ ದೇವದಾಸಿ ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ. ಅಂತೆಯೇ ದೇವದಾಸಿ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸಲಾಗುವುದು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಅವರ ಚುಕ್ಕೆ ಗುರುತಿನ…

Read More