ಕಲಬುರಗಿ | ಸಂಘವೊಂದರ ನೋಂದಣಿ ಮಾಡುವುದಕ್ಕಾಗಿ ಲಂಚದ ಬೇಡಿಕೆಯಿಟ್ಟು, 5 ಸಾವಿರ ರೂಪಾಯಿ ಹಣ ಪಡೆಯುತ್ತಿರುವಾಗಲೇ ಅಧಿಕಾರಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಕಲಬುರಗಿ: ಸಂಘವೊಂದರ ನೋಂದಣಿ ಮಾಡುವುದಕ್ಕಾಗಿ ಲಂಚದ ಬೇಡಿಕೆಯಿಟ್ಟು, 5 ಸಾವಿರ ರೂಪಾಯಿ ಹಣ ಪಡೆಯುತ್ತಿರುವಾಗಲೇ ಅಧಿಕಾರಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬುಧವಾರ ಸೇಡಂ ಪಟ್ಟಣದಲ್ಲಿ ನಡೆದಿದೆ. ಬೀರಲಿಂಗೇಶ್ವರ ಹೊಸ ಕೋಳಿ ಸಾಕಾಣಿಕೆ ಮಾಡೋದಕ್ಕೆ ಹಾಗೂ ಮಾರಾಟಗಾರರ ಸಹಕಾರಿ ಸಂಘದ ನೊಂದಣಿಗೆ ಅಧಿಕಾರಿ ಮಲ್ಲಿಕಾರ್ಜುನ್ ಅವರು 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು ಬೀರಪ್ಪ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ ಮೇರೆಗೆ ಲೋಕಾ ಪೊಲೀಸರು ದಾಳಿ ನಡೆಸಿ,…
