ಬೆಟಗೇರಿ:ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ವಿವಿಧ ಯೋಜನೆಯಡಿಯಲ್ಲಿ ಸಾಲ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.
ಬೆಟಗೇರಿ:ಗ್ರಾಮೀಣ ವಲಯದ ಕೆನರಾ ಬ್ಯಾಂಕ್‌ಗಳಲ್ಲಿ ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಹಾಗೂ ಗ್ರಾಹಕರಿಗೆ, ದೊರಕುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹುಬ್ಬಳ್ಳಿಯ ಕೆನರಾ ಬ್ಯಾಂಕ್ ಸರ್ಕಲ್ ಆಫೀಸ್‌ನ ಜನರಲ್ ಮ್ಯಾನೇಜರ್ ವಿಜಯಕುಮಾರ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ಇತ್ತೀಚೆಗೆ ನಡೆದ ಕೃಷಿ ಮತ್ತು ಸ್ವ ಸಹಾಯ ಸಂಘಗಳ ಸಾಲ ವಿತರಣೆ ಹಾಗೂ ಜಾಗೃತಿ ಶಿಬಿರದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಬೆಟಗೇರಿ ಕೆನರಾ ಬ್ಯಾಂಕ್ ಶಾಖೆ ವ್ಯಾಪ್ತಿಯ ಸ್ಥಳೀಯ…
