ಸವದತ್ತಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲು ತಾಲೂಕಾ ಮಟ್ಟದ ಪಲ್ಸ್ ಪೋಲಿಯೋ ಟಾಸ್ಕ್ ಫೋರ್ಸ್ ಸಭೆ.
ಬೆಳಗಾವಿ ಜಿಲ್ಲೆ ಸವದತ್ತಿ ನಗರದ ತಾಲೂಕಾ ದಂಡಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ತಾಲೂಕಾ ಮಟ್ಟದ ಪಲ್ಸ್ ಪೋಲಿಯೋ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ವಹಿಸಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ತಾಲೂಕು ಶೇ.100.39 ರಷ್ಟು ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ. ಈ ಬಾರಿ ಕೂಡ ಅದೇ ಉತ್ಸಾಹ ಮತ್ತು ಜವಾಬ್ದಾರಿಯಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಸಭೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಸ್ತ್ರತವಾಗಿ ಚರ್ಚಿಸಲಾಯಿತು. ಪತ್ರಿಕೆಗಳು,…
