ಮಾಜಿ ಶಾಸಕ ಸಂಜಯ ಪಾಟೀಲ ಮನೆ ಎದುರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಬೆಳಗಾವಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ಶಾಸಕ ಸಂಜಯ ಪಾಟೀಲ್ ಅವರ ಹಿಂದವಾಡಿಯಲ್ಲಿರುವ ನಿವಾಸದ ಮುಂದೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಶನಿವಾರ ರಾತ್ರಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಸುಸಂಸ್ಕ್ರತ ಪಕ್ಷ, ಮಹಿಳೆಯರಿಗೆ ರಕ್ಷಣೆ ನೀಡುವ ಬಿಜೆಪಿ ಎಂದು ಕೊಚ್ಚಿಕೊಳ್ಳುವ ಮಾಜಿ ಶಾಸಕ ಸಂಜಯ ಪಾಟೀಲ್ ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾತನಾಡಿರುವುದು ಖಂಡನೀಯ…
