ಅಬಕಾರಿ ಇಲಾಖೆ ಹಳೆಯ ಆರೋಪಿಗಳ ಪರೇಡ್
ಧಾರವಾಡ ಸನ್ನದೇತರ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ, ನೀರು ಮಿಶ್ರಿತ ಮದ್ಯಸಾರ ಮಾರಾಟ, ಹೊರ ರಾಜ್ಯದ ಮದ್ಯ ಮಾರಾಟ, ಕಳ್ಳಭಟ್ಟಿ ಹಾಗೂ ನಕಲಿ ಮದ್ಯ ಮಾರಾಟ ಹಾಗೂ ಯಾವುದೇ ರೀತಿಯ ಮಾದಕ ವಸ್ತುಗಳ ಮಾರಾಟದಂತಹ ಪ್ರಕರಣಗಳಲ್ಲಿ ಭಾಗಿಯಾಗಿ ಅಬಕಾರಿ ಅಪರಾಧಗಳಲ್ಲಿ ತೊಡಗಿದ್ದ ಹಳೆಯ ಆರೋಪಿಗಳ ಚಲನ ವಲಯಗಳ ಮೇಲೆ ತೀವ್ರ ನಿಗಾ ವಹಿಸುವ ನಿಟ್ಟಿನಲ್ಲಿ ಮತ್ತು ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಇರುವ ಹಳೆಯ 150 ಆರೋಪಿಗಳ ಪರೇಡ್‍ನ್ನು ನವನಗರದ ಅಬಕಾರಿ ಉಪ…
