ವೀರಸೌಧದಲ್ಲಿ ಗಾಂಧೀ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
ಬೆಳಗಾವಿ. ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅನಾವರಣಗೊಳಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್, ಶರಣಬಸಪ್ಪ ದರ್ಶನಾಪುರ, ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ,…
