ಎಸ್ಎಂ ಕೃಷ್ಣ ನಿಧನ, ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಇನ್ನಿಲ್ಲ
ಬೆಂಗಳೂರು: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು. ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ…
