ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನದಲ್ಲಿ ಯಾವುದೇ ಲೋಪಗಳು ಆಗದಂತೆ ಎಲ್ಲ ಸಮಿತಿಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಸುವರ್ಣ ವಿಧಾನಸೌಧದಲ್ಲಿ ನಡೆದಿರುವ ವಿವಿಧ ಸಿದ್ಧತಾ ಕೆಲಸಗಳನ್ನು, ಸ್ವಚ್ಛತಾಕಾರ್ಯವನ್ನು ಮತ್ತು ಸಂಪರ್ಕ ವ್ಯವಸ್ಥೆಯನ್ನು ಪರಿಶೀಲಿಸಿದರು. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಗುರುವಾರ ನಡೆದ ಚಳಿಗಾಲ ಅಧಿವೇಶನ-2024 ಸಿದ್ಧತೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಚಳಿಗಾಲ ಅಧಿವೇಶನ ಕುರಿತಂತೆ ಈಗಾಗಲೇ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದ್ದು, ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸಬೇಕು.ಅಧಿವೇಶನಕ್ಕೆ ಆಗಮಿಸುವ ಅಧಿಕಾರಿ ಸಿಬ್ಬಂದಿಗಳಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು. ಡಿ.9…
