ಭಾಗ್ಯ ನಗರದಲ್ಲಿ 1 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿಪೂಜೆ ನೆರವೇರಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಭಾಗ್ಯ ನಗರದಲ್ಲಿ 1 ಕೋಟಿ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಹಂತ ಹಂತವಾಗಿ ಸರಕಾರದಿಂದ ಅನುದಾನ ಮಂಜೂರಾದ ತಕ್ಷಣ ಎಲ್ಲಾ ಕಾಮಗಾರಿ ಕೈಗೊಳ್ಳಲು ಕ್ರಮ ವಹಿಸಲಾಗುವದು. ಸರಕಾರದಿಂದ ದೊರೆತ ಅನುದಾನ ಸದ್ಭಳಕೆಯಾಗಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದ ಜನತೆ ಗುತ್ತಿಗೆದಾರರಿಗೆ ಸಹಕಾರ ನೀಡಿ…
