ರಾಯಣ್ಣ ನುಡಿನಮನ ಕಾರ್ಯಕ್ರಮದ ಪ್ರಯುಕ್ತ ಪಟ್ಟಣದ ಪೂರ್ವಭಾವಿ ಸಭೆ ನಡೆಸಲಾಯಿತು.
ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಜನವರಿ 26 ರಂದು ತಾಲೂಕಾ ಕುರುಬರ ಸಂಘ ಹಾಗೂ ಹಾಲುಮತ ಸಮಾಜದ ನೇತೃತ್ವದಲ್ಲಿ ನಡೆಯಲಿರುವ ಸಂಗೊಳ್ಳಿ ರಾಯಣ್ಣ ನುಡಿನಮನ ಕಾರ್ಯಕ್ರಮದ ಪ್ರಯುಕ್ತ ಪಟ್ಟಣದ ಕನಕ ಭವನದಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರದೇಶ ಕುರುಬರ ಸಂಘದ ತಾಲೂಕಾಧ್ಯಕ್ಷ ಪಡಿಯಪ್ಪ ಕ್ವಾರಿ, ಕ್ರಾಂತಿವಿರ ಸಂಗೊಳ್ಳಿ ರಾಯಣ್ಣನವರು ಹುತಾತ್ಮರಾದ ಪ್ರಯುಕ್ತ ತಾಲೂಕಿನ ಸಮಾಜ ಬಾಂಧವರ ನೇತೃತ್ವದಲ್ಲಿ ನುಡಿನಮನ ಕಾರ್ಯಕ್ರಮವನ್ನು ಸಾಲಹಳ್ಳಿ ಗ್ರಾಮದ ಶ್ರೀ ಬಬಲಾದೀಶ್ವರ ಮಠದ ಆವರಣದಲ್ಲಿ ಜ.26 ರಂದು…
