ಸೋಲಾರ ವಿದ್ಯುಚ್ಛಕ್ತಿ ಉತ್ಪಾದನೆ ಮತ್ತು ಬಳಕೆ ಇಂದು ಅನಿವಾರ್ಯ- ಡಾ. ಪ್ರಕಾಶ ತೆವರಿ, ಕುಲಪತಿಗಳು ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯ ಹುಬ್ಬಳ್ಳಿ.
ಸೌರ ರಥ ಜನಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದ ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಪ್ರಕಾಶ ತೆವರಿ ಮಾತನಾಡುತ್ತಾ ಸೋಲಾರ ವಿದ್ಯುಚ್ಛಕ್ತಿ ಉತ್ಪಾದನಾ ಕ್ಷೇತ್ರದಲ್ಲಿನ ಇತ್ತೀಚಿನ ಸಂಶೋಧನೆಗಳಿಂದಾಗಿ ಕಡಿಮೆ ವೆಚ್ಚದಲ್ಲಿ ಸೋಲಾರ ಘಟಕಗಳನ್ನು ಅಳವಡಿಸಲು ಸಾಧ್ಯವಾಗಿದೆ. ಜನ ಸಾಮಾನ್ಯರು ವಿದ್ಯುತ್ ಸ್ವಾವಲಂಬನೆ ಹೊಂದಲು ಸರಕಾರ ನೀಡುತ್ತಿರುವ ರೂ. 78,000/- ವರೆಗಿನ ಸಬ್ಸಿಡಿ ಯಿಂದಾಗಿ ಇದೊಂದು ರಾಷ್ಟ್ರವ್ಯಾಪಿ ಆಂದೋಲನವಾಗಿ ಹೊರಹೊಮ್ಮುತ್ತಿದ್ದು, ಇನ್ನೂ ಹೆಚ್ಚು ಹೆಚ್ಚು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯವು…
