ಛಾಯಾಗ್ರಾಹಕರಿಗೆ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ
ದಾವಣಗೆರೆ ಯಲ್ಲಿ ನಡೆದ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಕರ್ನಾಟಕ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಷನ್ ರಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಮನು.ಎಂ. ದೇವನಗರಿ ಇವರಿಗೆ ದಾವಣಗೆರೆ ಜಿಲ್ಲೆಯ ಸಮಸ್ತ ಫೋಟೋಗ್ರಾಫರ್ ಗಳ ಹಾಗೂ ವೃತ್ತಿಬಾಂಧವರ ಪರವಾಗಿ ಅಸಂಘಟಿತ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ನೀಡಿದರು. ಈ ಸಂದರ್ಭದಲ್ಲಿ ಅಸಂಘಟಿತ ಕಾರ್ಮಿಕರ ಇಲಾಖೆಗೆ ಸೇರ್ಪಡೆ ಮಾಡಿದ್ದಕ್ಕಾಗಿ ಸಚಿವರಿಗೆ ರಾಜ್ಯದ ಸಮಸ್ತ ಛಾಯಾಗ್ರಾಹಕರ ಪರವಾಗಿ…
