ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲಿ ಭಾನುವಾರ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ‌ ಸರಕಾರದ‌ ಮಾರ್ಗಸೂಚಿ ಪ್ರಕಾರ ಪುನರ್ವಸತಿಯನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಅಭಯಾರಣ್ಯದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್ ಮತ್ತಿತರ ಮೂಲಸೌಕರ್ಯಗಳನ್ನು ಕಲ್ಪಿಸುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಳೇವಾಡಿ‌ ಗ್ರಾಮದ ಜನರು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣವೇ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು….

Read More

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳು ಸುಧಾರಣೆಯಾಗಲಿ: ನ್ಯಾ.ರಾಜೇಶ್ ಎನ್.ಹೊಸಮನೆ

ಬಳ್ಳಾರಿ ನಗರದ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೂರನೇಯ ಮಹಡಿಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಅಂಗನವಾಡಿ ಶಾಲೆಗಳ ನೂನ್ಯತೆ ಕುರಿತಾಗಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಅವರು ಮಾತನಾಡಿದರು.ಉಚ್ಛ ನ್ಯಾಯಾಲಯದ ಆದೇಶದನ್ವಯ ಕರ್ನಾಟಕ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹಾಗೂ ಅಪೌಷ್ಟಿಕತೆ ನಿವಾರಣಾ ರಾಜ್ಯ ಸಲಹಾ ಸಮಿತಿಯ ಅಧ್ಯಕ್ಷರೂ ಆದ ವೇಣುಗೋಪಾಲಗೌಡ ಇವರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಸಮಿತಿ ರಚಿಸಲಾಗಿದೆ. ಸಮಿತಿಯ ಮೂಲಕ…

Read More

ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ

ಬಳ್ಳಾರಿ,ಜಿಲ್ಲೆಯ ಎಲ್ಲಾ ರೈತರು ತಪ್ಪದೇ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯ ಪರಿಣಾಮಕಾರಿ ಅನುಷ್ಟಾನದ ಕುರಿತು ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅನುಷ್ಟಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲಿ ಕೃಷಿ ಚಟುವಟಿಕೆಗಳು ಬರದಿಂದ ಸಾಗುತ್ತಿವೆ. ಎಲ್ಲಾ ಅಧಿಕಾರಿಗಳು ಜಿಲ್ಲೆಯಲ್ಲಿ ಬೆಳೆ ವಿಮೆ ಕುರಿತು…

Read More

ಡಿ.ದೇವರಾಜು ಅರಸುರವರ 109ನೇ ಜನ್ಮದಿನ ಆಚರಣೆ ನಿಮಿತ್ತ ಪೂರ್ವಭಾವಿ ಸಭೆ

ಬಳ್ಳಾರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜು ಅರಸು ಅವರ 109 ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ವಹಿಸಿ ಮಾತನಾಡಿದರು.ಆಗಸ್ಟ್ 20 ರಂದು ಬೆಳಿಗ್ಗೆ 10.30 ಕ್ಕೆ ನಗರದ ವಾಲ್ಮೀಕಿ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲಾ ಸಂಘ ಸಂಸ್ಥೆಯ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಹಿಂದುಳಿದ ವರ್ಗಗಳ ಹರಿಕಾರರಾಗಿರುವ ಡಿ.ದೇವರಾಜು ಅರಸು ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ…

Read More

ನುಲಿಯ ಚಂದಯ್ಯ, ಬ್ರಹ್ಮಶ್ರೀ ನಾರಾಯಣಗುರು, ಶ್ರೀಕೃಷ್ಣ ಜಯಂತಿ ಪೂರ್ವಭಾವಿ ಸಭೆ

ಬಳ್ಳಾರಿ,ಜಿಲ್ಲಾಡಳಿತ ವತಿಯಿಂದ ವಿವಿಧ ಮಹನೀಯರ ಜಯಂತಿಯ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.ನಗರದ ನೂತನ ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.19 ರಂದು ನುಲಿಯ ಚಂದಯ್ಯ ಜಯಂತಿ, ಆ.20 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಆ.26 ರಂದು ಶ್ರೀಕೃಷ್ಣ…

Read More

ಸ್ನೇಹಂ ಸೇಲೋ ಟೇಪ್ ಕಾರ್ಖಾನೆಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಅಗ್ನಿ ದುರಂತ

ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ಇರುವ ಸ್ನೇಹಂ ಸೇಲೋ ಟೇಪ್ ಕಾರ್ಖಾನೆಯಲ್ಲಿ ದಿನಾಂಕ: 06.08.2024 ರ ರಾತ್ರಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಅಗ್ನಿ ದುರಂತ ಸಂಭವಿಸಿದೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿಯವರು ಭೇಟಿ ನೀಡಿ ಪರಿಶೀಲಿಸಿದರು.ಕಾರ್ಖಾನೆಯಲ್ಲಿ ಉಂಟಾದ ಅಗ್ನಿ ನಂದಿಸಲು ಜಿಲ್ಲಾಡಳಿತದಿಂದ ಎಲ್ಲಾ ಅಗತ್ಯ ಕ್ರಮ ವಹಿಸಲಾಗಿರುವ ಬಗ್ಗೆ ಹಾಗೂ ಕಾರ್ಖಾನೆಯಲ್ಲಿ ತಯಾರಿಸಲಾಗುತ್ತಿದ್ದ ಟೇಪ್ ಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿವರಿಸಲಾಯಿತು.ಬೆಳಗಾವಿ ನಗರ ಪೋಲೀಸ್‌ ಆಯುಕ್ತರಾದ ಶ್ರೀ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌,…

Read More

ಶಾಸಕ ಅಶೋಕ ಪಟ್ಟಣ ಅವರು ಉಚಿತವಾಗಿ ಕೊಡುಗೆ ನೀಡಿದ ಸ್ಕೂಲ್ ಬ್ಯಾಗ್ ಹಾಗೂ ನೋಟ್ ಬುಕ್ಸ್ಗಳನ್ನು ವಿದ್ಯಾರ್ಥಿಗಳಿಗೆ ವಿಶ್ವಭಾರತಿ ಪ.ಪೂ ಕಾಲೇಜಿನಲ್ಲಿ ನ್ಯಾಯವಾದಿ ಜಮುನಾ ಪಟ್ಟಣ ಅವರು ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿಶ್ವಭಾರತಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ನೋಟ್‌ಬುಕ್ಸ್ಗಳನ್ನು ನ್ಯಾಯವಾದಿ ಜಮುನಾ ಪ್ರದೀಪ ಪಟ್ಟಣ ವಿತರಿಸಿ ಮಾತನಾಡಿದರು ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲೆಂದು ಶಾಸಕರಾದ ಅಶೋಕ ಪಟ್ಟಣ ಅವರು ಒಂದನೇ ತರಗತಿಯಿಂದ ಪದವಿ ಹಂತದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ ಹಾಗೂ ನೋಟ್ ಬುಕ್ಸ್ ನೀಡುತ್ತಿದ್ದಾರೆ. ಶಿಕ್ಷಣದಿಂದಲೆ ದೇಶದ ಪ್ರಗತಿ ಸಾಧ್ಯವಿದೆ. ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸರಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು. ಅವುಗಳ ಸದುಪಯೋಗ ಪಡಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು…

Read More

ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ನೇಕಾರ ಸಮುದಾಯದಿಂದ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಕಾಶಿಪೇಟೆಯ ತಾರಮ್ಮ ನಾಗರಾಳ ಮತ್ತು ಮುಗಳಿ ಅವರ ನಿವಾಸದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಜ್ಯ ದೇವಾಂಗ ಸಂಘದ ಉಪಾಧ್ಯಕ್ಷ ಶಂಕ್ರಣ್ಣ ಮುರುಡಿ ಪಾಲ್ಗೊಂಡು ಮಾತನಾಡಿದರು ಖಾದಿ ಉತ್ಪನ್ನ ಬಟ್ಟೆಗಳಿಗೆ ಸರಕಾರ ಪೂರಕ ವಾತಾವರಣ ಕಲ್ಪಿಸುವ ಮೂಲಕ ನಸಿಸಿ ಹೋಗುತ್ತಿರುವ ಕೈಮಗ್ಗ ನೇಕಾರಿಕೆಗೆ ಉತ್ತೇಜನ ನೀಡಬೇಕು ಕಾಲ ಬದಲಾದಂತೆ ನೇಕಾರಿಕೆಯು ಬದಲಾವಣೆ ಹಾದಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಸರಕಾರ ವಿವಿಧ ಇಲಾಖೆ ಸಿಬ್ಬಂದಿಗೆ ಕೈಮಗ್ಗ ಉತ್ಪನ್ನಗಳ ವಸ್ತ್ರಗಳನ್ನು ಕಡ್ಡಾಯವಾಗಿ ಬಳಸುವಂತೆ ಅದೇಶ…

Read More

ನೌಕರರ ಸಂಘದ ನೇತೃತ್ವದಲ್ಲಿ ನೌಕರರ ಮಕ್ಕಳಿಗೆ ಏರ್ಪಡಿಸಿದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಾಧನೆ ಮಾಡಿದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ನೌಕರರ ಸಭಾ ಭವನದಲ್ಲಿ ನೌಕರರ ಸಂಘದ ನೌಕರರು ಆಯೋಜಿಸಿದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ 2024-25 ನೇ ಸಾಲಿನಲ್ಲಿ ಎಸ್‌ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಕಾಂಗ್ರೆಸ್ ಮುಖಂಡ ಪ್ರದೀಪ ಅವರು ಉದ್ಘಾಟಿಸಿದರು. ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಮಾತ್ರ ಮಹತ್ವ ನೀಡದೇ, ತಮ್ಮ ವ್ಯಾಸಂಗಕ್ಕೆ ಮಾರ್ಗದರ್ಶನ ನೀಡಿದ ಶಿಕ್ಷಕರು, ಪಾಲಕರನ್ನು ದೇವರಂತೆ ಕಾಣಬೇಕು. ಅಂದಾಗ ಎಲ್ಲರೂ ನೆಮ್ಮದಿಯ ಜೀವನ ಸಾಗಿಸಲು ಸೂಚಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ. ಬಳಿಗಾರ ಮಾತನಾಡಿ,…

Read More

ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ ನೇಕಾರಿಕೆ ಸನ್ಮಾನ…

ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ ಈಳಗೇರ ಇವರ ನೇತೃತ್ವದಲ್ಲಿ ಸನ್ಮಾನ್ಯ ಶ್ರೀ ಚಿಕ್ಕರೇವಣ್ಣರವರ ಮತಕ್ಷೆತ್ರ ಆದಕಟಕೋಳ ಗ್ರಾಮದಲ್ಲಿ ಸ್ವದೇಶಿ ಸಂಪ್ರದಾಯದಂತೆ ಕೈಮಗ್ಗದ ಮೂಲಕ ನೇಕಾರಿಕೆ, ಮಾಡುವ ತಾಯಂದಿರಿಗೆ ಶ್ರೀಮತಿ ಶಾಲಿನಿ ಈಳಗೇರ ಮೇಡಮ್ ಹಾಗೂ ರಾಮದುರ್ಗ ಮಂಡಲದ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು… ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಮಹಿಳಾ ಮೋರ್ಚಾದ ಉಪಾಧ್ಯಕ್ಷ ಶ್ರೀಮತಿ ಶಾಲಿನಿ ಈಳಗೇರ ಇವರು ನಮ್ಮ ಮಹಿಳಾ ಮೋರ್ಚಾದ ರಾಜ್ಯ ಅಧ್ಯಕ್ಷ…

Read More