ನಿರಂತರ ಮಳೆಯಿಂದ ಉಂಟಾದ ಬೆಳೆ ಹಾನಿಯ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ವಹಿಸಿ, ಮಾತನಾಡಿದರು.ಮುಂಗಾರು ಹಂಗಾಮಿನಲ್ಲಿ ಅತಿ ಮತ್ತು ನಿರಂತರ ಮಳೆಯಿಂದಾಗಿ ಬೆಳೆ ಹಾನಿ ಆಗಿರುವ ಕುರಿತು ಕಂದಾಯ ಮತ್ತು ಕೃಷಿ ಇಲಾಖೆ ಮಾಡುತ್ತಿರುವ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ, ವರದಿ ನೀಡಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಸೂಚಿಸಿದರು. ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಬೆಳೆ ಹಾನಿ ಆಗಿದೆ. ಈ ಕುರಿತು…
