ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಮಾತನಾಡಿದರು. ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗಾಗಿ ಹಾಗೂ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು ಅನುಕೂಲವಾಗುವಂತೆ ಬಜೆಟ್ ನಲ್ಲಿ ಎರಡು ಕೋಟಿ ರೂಪಾಯಿ ಅನುದಾನವನ್ನು ಒದಗಿಸಿರುತ್ತದೆ.ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಹೇಳಿದರು ಶತಮಾನೋತ್ಸವ ಆಚರಣೆ ಹಾಗೂ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಸರಕಾರದ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಗಾಂಧೀಜಿಯವರ ಜೀವನ ಮತಗತು ಸ್ವಾತಂತ್ರ್ಯ…
