ಗಣಿ ಮತ್ತು ಭೂವಿಜ್ಞಾನ ಇಲಾಖೆ ಇತಿಹಾಸದಲ್ಲೇ ಅತಿದೊಡ್ಡ ವರ್ಗಾವಣೆ: ಬರೋಬ್ಬರಿ 160 ಅಧಿಕಾರಿಗಳಿಗೆ ಟ್ರಾನ್ಸ್ಫರ್ ಭಾಗ್ಯ
ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಮತ್ತು ಪಾರದರ್ಶಕತೆ ತರಲು ಸಿಎಂ ಡಿ.ಕೆ. ಶಿವಕುಮಾರ್ ಗಣಿ ಇಲಾಖೆಯ 160 ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಇಲಾಖೆಯ ಇತಿಹಾಸದಲ್ಲೇ ಇದು ಅತಿದೊಡ್ಡ ಮೇಜರ್ ಸರ್ಜರಿಯಾಗಿದೆ. ದಶಕಗಳ ಕಾಲ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಸ್ವಂತ ಹಾಗೂ ನೆರೆಯ ಜಿಲ್ಲೆಗಳಲ್ಲಿ ಬೀಡು ಬಿಟ್ಟಿದ್ದ ಅಧಿಕಾರಿಗಳಿಗೆ ಟ್ರಾನ್ಸ್ಫರ್ ನೀಡಲಾಗಿದೆ. ಬೆಂಗಳೂರು, ಜುಲೈ 20: ಗಣಿ ಇಲಾಖೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೇಜರ್ ಸರ್ಜರಿ ಮಾಡಿದ್ದು, ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ್ದ ಇಲಾಖೆಯ ಶೇ.80ರಷ್ಟು ಸಿಬ್ಬಂದಿಯನ್ನು…
