ಯರಗಟ್ಟಿ ಹಾಗೂ ರಾಮದುರ್ಗ ತಾಲೂಕಿನ ವಿವಿಧ ಪ್ರದೇಶಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ
ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭಾನುವಾರ (ಆ.16) ಯರಗಟ್ಟಿ ಹಾಗೂ ರಾಮದುರ್ಗ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆಹಾನಿಯನ್ನು ಪರಿಶೀಲಿಸಿದರು. ಯರಗಟ್ಟಿ ತಾಲೂಕಿನ ಕುರಬಗಟ್ಟಿ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು, ಮಳೆ ಕೊರತೆಯಿಂದ ಹಾನಿಗೊಳಗಾಗಿರುವ ವಿವಿಧ ಬೆಳೆಗಳ ಸ್ಥಿತಿಗತಿಗಳನ್ನು ವೀಕ್ಷಿಸಿದರು. ಸರ್ವೆ ನಂಬರ್ 494ರ ರೇವಪ್ಪ ಚಿಕ್ಕಣ್ಣವರ ಅವರ ಜಮೀನಿನಲ್ಲಿ…
